Monday, December 4, 2023
spot_img
- Advertisement -spot_img

ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ನೆಹರು: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪ್ರಜಾಪ್ರಭುತ್ವ, ಸಮಾಜವಾದ, ಜಾತ್ಯತೀತತೆ ನೆಹರು ಅವರ ಬದುಕಿನ ಮೌಲ್ಯಗಳು. ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ನೆಹರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜವಹರಲಾಲ್ ನೆಹರು ಅವರ ಜನ್ಮ ದಿನದ ಪ್ರಯುಕ್ತ ವಿಧಾನಸೌಧದ ಮುಂಭಾಗದ ನೆಹರು ಪ್ರತಿಮೆ ಬಳಿ ಅವರ ಫೋಟೋಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಸಿಎಂ, ನೆಹರು ಅವರ ದೂರದೃಷ್ಟಿಯ ಫಲವನ್ನು ಈ ಹಿಂದಿನ ಪೀಳಿಗೆಯವರು ಅನುಭವಿಸಿದ್ದಾರೆ, ಈಗಿನವರು ಅನುಭವಿಸುತ್ತಿದ್ದಾರೆ ಮತ್ತು ಮುಂದಿನವರು ಅನುಭವಿಸುತ್ತಾರೆ. ಪ್ರಜಾಪ್ರಭುತ್ವ, ಸಮಾಜವಾದ, ಜಾತ್ಯತೀತತೆ ನೆಹರು ಬದುಕಿನ ಮೌಲ್ಯಗಳಾಗಿದ್ದವು. ಈ ಮೌಲ್ಯಗಳನ್ನು ಪ್ರಧಾನಮಂತ್ರಿಯಾಗಿ ಭಾರತದಲ್ಲಿ ನೆಲೆಯೂರಿಸಲು ನೆಹರು ಶ್ರಮಿಸಿದರು. ನಮ್ಮ ಬದುಕಿನಲ್ಲಿ ಈ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದೇ ನೆಹರು ಅವರಿಗೆ ನಾವು ಸಲ್ಲಿಸುವ ಅರ್ಥಪೂರ್ಣ ಶ್ರದ್ಧಾಂಜಲಿ. ಮಕ್ಕಳ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಕಾರಣಕ್ಕೆ ದೇಶದ ಮಕ್ಕಳ ಪಾಲಿಗೆ ಜವಹರಲಾಲ್‌ ನೆಹರು ‘ಚಾಚಾ ನೆಹರು’ ಆದರು ಎಂದರು.

ಇದನ್ನೂ ಓದಿ : ಸಿಎಂ ತವರೂರಿನಲ್ಲೇ ಅನ್ನಭಾಗ್ಯ ಯೋಜನೆಯ ದುರುಪಯೋಗ

ಸ್ವಾತಂತ್ರ್ಯ ಹೋರಾಟದಲ್ಲಿ 9 ವರ್ಷಗಳ ಕಾಲ ನೆಹರು ಜೈಲುವಾಸ ಅನುಭವಿಸಿದ್ದರು. ಸ್ವಾತಂತ್ರ್ಯ ನಂತರದಲ್ಲಿ ದೇಶದ ಪ್ರಧಾನಿಯಾಗಿ ಆಧುನಿಕ ಭಾರತದ ಶಿಲ್ಪಿ ಎನಿಸಿಕೊಂಡರು. ನೆಹರು ಅವರು ಪ್ರಧಾನಿ ಆಗಿ ವಿರೋಧ ಪಕ್ಷದವರು ಮಾತಾಡುವಾಗ ಸಹನೆಯಿಂದ ಕೇಳಿಸಿಕೊಳ್ಳುತ್ತಿದ್ದರು. ವಿರೋಧ ಪಕ್ಷದವರ ಮಾತಿಗೆ ಗೌರವ ಕೊಡುತ್ತಿದ್ದ ಘನತೆಯ ವ್ಯಕ್ತಿತ್ವ ಅವರದ್ದಾಗಿತ್ತು. ಯೋಜನಾ ಆಯೋಗ ರಚಿಸಿದರು. ಪಂಚವಾರ್ಷಿಕ ಯೋಜನೆ ಜಾರಿಗೆ ತಂದರು. ಕೊನೆ ಕ್ಷಣದವರೆಗೂ ಪ್ರಜಾಪ್ರಭುತ್ವ, ಜಾತ್ಯಾತೀತ ತತ್ವ, ಸಮಾಜವಾದದ ಮೌಲ್ಯಗಳನ್ನು ಜನಮಾನಸಕ್ಕೆ ವಿಸ್ತರಿಸಲು ಶ್ರಮಿಸಿದರು ಎಂದು ಹೇಳಿದರು.

ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು: ಒಂದು ಕೋಟಿಗೂ ಅಧಿಕ ಮಹಿಳೆಯರು ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಿದ್ದಾರೆ. ಇದು ಸಾಧನೆ ಅಲ್ವಾ? ಈ ಸಾಧನೆಗಳನ್ನು ಕುಮಾರಸ್ವಾಮಿಗೆ ಸಹಿಸಲು ಆಗುತ್ತಿಲ್ಲ. ಹಾಗಾಗಿ, ಅವರು ಪರದಾಡುತ್ತಿದ್ದಾರೆ ಎಂದು ಸರ್ಕಾರದ ಗ್ಯಾರಂಟಿಗಳನ್ನು ಟೀಕಿಸಿದ ಕುಮಾಸ್ವಾಮಿಗೆ ಸಿಎಂ ತಿರುಗೇಟು ಕೊಟ್ಟರು.

ಬಿಜೆಪಿಯವರಿಗೆ ದೇಶ ಆಳಲು ಆರ್ಹತೆ ಇಲ್ಲ: ಬಿಜೆಪಿಯವರು ಸ್ವಾತಂತ್ರದ ಪಲಾನುಭವಿಗಳು ಅಷ್ಟೇ. ಆದರೆ, ನೆಹರು ಒಂಭತ್ತು ವರ್ಷಗಳ ಕಾಲ ದೇಶದ ಸ್ವಾತಂತ್ರ್ಯಕ್ಕಾಗಿ ಜೈಲು ವಾಸ ಅನುಭವಿಸಿದ್ದರು. ವಲ್ಲಭ ಬಾಯಿ ಪಟೇಲ್ ಕೂಡ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದರು. ಬಿಜೆಪಿಯವರು ಯಾರದರು ಸ್ವಾತಂತ್ರ್ಯಕ್ಕಾಗಿ ಜೈಲಿಗೆ ಹೋಗಿದ್ದಾರಾ? ಅವರಿಗೆ ನೆಹರುವನ್ನು ಓವರ್‌ ಟೇಕ್‌ ಮಾಡುವ ಅರ್ಹತೆ ಇದೆಯಾ? ಎಂದು ಸಿಎಂ ಪ್ರಶ್ನಿಸಿದರು. ಬಿಜೆಪಿಯವರು ಸಂವಿಧಾನ, ಪ್ರಜಾಪ್ರಭುತ್ವಕ್ಕೆ ವಿರೋಧಿಗಳು. ಯಾರಿಗೆ ಪ್ರಜಾಪ್ರಭುತ್ವ ಮೇಲೆ ನಂಬಿಕೆ ಇಲ್ಲವೋ ಅವರು ದೇಶ ಆಳಲು ಅರ್ಹತೆ ಇಲ್ಲದವರು. ನನ್ನ ಪ್ರಕಾರ ಬಿಜೆಪಿಯವರಿಗೆ ದೇಶ ಆಳಲು ಅರ್ಹತೆ ಇಲ್ಲ ಎಂದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles