ಹಾವೇರಿ : ಹಾವೇರಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೈ ತಪ್ಪಿದ್ದರಿಂದ ನೆಹರೂ ಓಲೇಕಾರ್ ಇಂದು ಬಿಜೆಪಿ ಬಿಜೆಪಿ ತ್ಯಜಿಸಲಿದ್ದಾರೆ.
ಬೆಂಬಲಿಗರ ಸಭೆಯಲ್ಲಿ ಮಾತನಾಡಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ, ಇಂದು ಶಿರಸಿಗೆ ತೆರಳಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದರು. ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ನಂತರ ಜೆಡಿಎಸ್ ಪಕ್ಷಕ್ಕೆ ಸೇರುತ್ತೇನೆ, ಸಿಎಂ ಬೊಮ್ಮಾಯಿ ನನ್ನ ವಿರುದ್ಧ ಉದ್ದೇಶಪೂರ್ವಕವಾಗಿ ಮಾತಾಡಿಲ್ಲ, ನನ್ನ ಟಿಕೆಟ್ ತಪ್ಪಿಸಲು ಅನೇಕ ಜನ ನನ್ನ ಬಗ್ಗೆ ಮಾತಾಡಿದ್ದಾರೆ ಎಂದು ಬೇಸರಿಸಿದರು.
ಕಾರ್ಯಕರ್ತರ ಅಭಿಪ್ರಾಯಕ್ಕಾಗಿ ಕಾಯುತ್ತಿದ್ದೇನೆ. ಅವರೊಂದಿಗಿನ ಸಭೆ ನಂತರ ಭವಿಷ್ಯದ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇನೆ. ಜೆಡಿಎಸ್ ಮತ್ತು ಇನ್ನೊಂದು ಪಕ್ಷದಿಂದ ತನಗೆ ಆಫರ್ ಬಂದಿದೆ ಎಂದು ತಿಳಿಸಿದ್ದರು.
ಹಾವೇರಿ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ನ್ನು ಗವಿಸಿದ್ದಪ್ಪ ದ್ಯಾಮಣ್ಣನವರ್ ಅವರಿಗೆ ನೀಡಲಾಗಿದೆ. ಅಂದಹಾಗೆ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೂಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಬಿಜೆಪಿ ಟಿಕೆಟ್ ಸಿಗದ್ದಕ್ಕೆ ಅಸಾಮಾಧಾನಗೊಂಡಿದ್ದಾರೆ.