ನಿಮಗಾಗಿ ನಾನು ತಲೆಕೊಟ್ಟೆ, ನನ್ನಷ್ಟು ಪೆಟ್ಟು ನಿಮಗೆ ಆಗಿದ್ರೆ ಮನೆಯಿಂದ ಆಚೆ ಬರ್ತಿರ್ಲಿಲ್ಲ

ಚನ್ನಪಟ್ಟಣ : ಚನ್ನಪಟ್ಟಣದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಾನೇನು ಆಸೆ ಪಟ್ಟಿರಲ್ಲಿಲ್ಲ. ನಿಮಗಾಗಿ ಮತ್ತು ಪಕ್ಷಕ್ಕಾಗಿ ಬಂದು ನಾನು ತಲೆಕೊಟ್ಟೆ. ರಾಜಕೀಯವಾಗಿ ನನಗೆ ಆಗಿರುವಷ್ಟು ಪೆಟ್ಟು ನಿಮಗ್ಯಾರಿಗಾದರೂ ಆಗಿದ್ದರೆ ಮನೆಯಿಂದ ಆಚೆ ಬರುತ್ತಿರಲಿಲ್ಲ. ಆದರೆ, ನಾನು ಬಂದು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಚನ್ನಪಟ್ಟಣದ ದೊಡ್ಡಮಳೂರು ಗ್ರಾಮದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ಚುನಾವಣೆಗೆ ಸ್ಪರ್ಧಿಸಿ ಎಂದರು. ಆದರೆ, ನಾನು ನಿರಾಕರಿಸಿದೆ. ಅದರೆ, ಇಲ್ಲಿ ಬಂದು ನಿಮಗಾಗಿ ತಲೆಕೊಟ್ಟೆ. ಮೊದಲು ಜಯಮುತ್ತು ಅಥವಾ ಹಾಪ್‌ಕಾಮ್ಸ್ ದೇವರಾಜು ಇಬ್ಬರಲ್ಲಿ ಒಬ್ಬರು ಸ್ಪರ್ಧಿಸುವಂತೆ ಕುಮಾರಸ್ವಾಮಿ ತಿಳಿಸಿದ್ದರು. ಆದ್ರೆ, ಕಡೆಗೆ ನನ್ನ ತಲೆಗೆ ಕಟ್ಟಿದರು. ಸೋತರೂ ನಾನು ಮನೆಯಲ್ಲಿ ಕೂತಿಲ್ಲ. ಪಕ್ಷ ಸಂಘಟಿಸುವ ಕೆಲಸ ಮಾಡುತ್ತಿದ್ದೇನೆ. ಇದು ನೀವು ಕಟ್ಟಿರುವ ಪಕ್ಷ. ಇಲ್ಲಿ ಪ್ರಾಮಾಣಿಕರು ಯಾರು? ಅಪ್ರಾಮಾಣಿಕರು ಯಾರು ಎಂದು ತಮ್ಮ ಮನಸಾಕ್ಷಿಗೆ ಕೇಳಿಕೊಂಡರೆ ಸಾಕು ಎಂದರು.

ಎರಡು ತಿಂಗಳ ಹಿಂದೆ ದೆಹಲಿಗೆ ಬಂದ ಜಯಮುತ್ತು ತಾಲ್ಲೂಕು ಅಧ್ಯಕ್ಷ ಸ್ಥಾನದಿಂದ ಮುಕ್ತಗೊಳಿಸಿ ಎಂದು ಮನವಿ ಮಾಡಿದ್ದಾರೆ. ನವಂಬರ್ ವೇಳೆಗೆ ಕೆಲ ಜಿಲ್ಲೆಗಳ ಜೆಡಿಎಸ್ ಅಧ್ಯಕ್ಷರ ಬದಲಾವಣೆ ಆಗಲಿದೆ. ಜಯಮುತ್ತು ಅವರನ್ನೇ ಮುಂದುವರಿಸುವುದಾದರೂ ಮುಂದುವರಿಸಿ, ಇಲ್ಲ ನೀವೇ ಮೂರು ನಾಲ್ಕು ಹೆಸರು ಅಂತಿಮಗೊಳಿಸಿ ಕಳಿಸಿ ಎಂದರು. ಮುಂದುವರೆದು ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗುವ ದಿನ ದೂರವಿಲ್ಲ. ಅವರು ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತ ದಿನ ನಾನು ಅಧಿಕಾರ ತೆಗೆದುಕೊಳ್ಳುವುದಿಲ್ಲ. ಕಾರ್ಯಕರ್ತರು, ಹಾಗೂ ಮುಖಂಡರಿಗೆ ಅಧಿಕಾರಿ ಸಿಕ್ಕಿಲ್ಲ ಎಂದು ದೂರು ಏನಿದೆಯೋ ಇದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ನಿಮಗೆ ಅಧಿಕಾರಿ ಕಲ್ಪಿಸಲು ಶ್ರಮಿಸುತ್ತೇನೆ ಎಂದು ನಿಖಿಲ್ ಕುಮಾರಸ್ವಾಮಿಯವರನ್ನ. ಮತ್ತೊಮ್ಮೆ ಸಿಎಂ ಮಾಡಬೇಕು. ಪಕ್ಷ ಉಳಿಸಬೇಕು. ಮಾತೆತ್ತಿದರೆ ಜೆಡಿಎಸ್ ವಿಲೀನವಾಗುತ್ತದೆ ಎನ್ನುತ್ತಾರೆ, ವಿಲೀನಗೊಳಿಸಲು ನಮ್ಮ ಕಾರ್ಯಕರ್ತರು ಅಷ್ಟು ಅಸಮರ್ಥರೇ. ಪಕ್ಷ ಕಟ್ಟುವ ಜವಬ್ದಾರಿ ನಮ್ಮ ಮೇಲಿದೆ ಎಂದು ಗುಡುಗಿದರು.

Leave a Reply

Your email address will not be published. Required fields are marked *