ರಾಮನಗರ: ರಾಮನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆಗೆ ಹೋಗುವ ವೇಳೆ ನಿಖಿಲ್ ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರೆ.
ರಾಮನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಇಂದು ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಮಾಜಿ ಪ್ರಧಾನಿ ದೇವೇಗೌಡರಿಂದ ಬಿ. ಫಾರಂ ಪಡೆದು ಆಶೀರ್ವಾದ ಪಡೆದುಕೊಳ್ಳಲು ಬಂದಿದ್ದರು. ಈ ವೇಳೆ ಹೆಚ್.ಡಿ ದೇವೇಗೌಡರು ಬಿ. ಫಾರಂ ನೀಡುತ್ತಿದ್ದಂತೆ ನಿಖಿಲ್ ಭಾವುಕರಾಗಿ ಕಣ್ಣೀರು ಹಾಕಿದರು.
ಅದಾದ ನಂತರ ಚುನಾವಣೆಯಲ್ಲಿ ಗೆಲುವು ಸಾಧಿಸಲು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹಾಗೂ ಚೆನ್ನಮ್ಮರ ಆಶೀರ್ವಾದ ಪಡೆದರು. ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿರುವ ಅನಿತಾ ಕುಮಾರಸ್ವಾಮಿ ಚುನಾವಣೆ ಕಣದಿಂದ ಹಿಂದೆ ಸರಿದಿದ್ದಾರೆ. ಈ ಹಿನ್ನೆಲೆ ನಿಖಿಲ್ ಕುಮಾರಸ್ವಾಮಿ ರಾಮನಗರದಿಂದ ಸ್ಪರ್ಧೆ ಮಾಡುತ್ತಿದ್ದಾರೆ.