Saturday, June 10, 2023
spot_img
- Advertisement -spot_img

ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ಕೊಡ್ತಾರಾ?

ಬೆಂಗಳೂರು: ಚುನಾವಣೆಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ನಿಖಿಲ್​ ಕುಮಾರಸ್ವಾಮಿ ಜೆಡಿಎಸ್‌ನ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

ಸದ್ಯಕ್ಕೆ ರಾಜಕೀಯ ಚಟುವಟಿಕೆಗಳಿಂದ ದೂರವಿದ್ದು, ಸಿನಿಮಾದಲ್ಲಿ ತೊಡಗಿಸಿಕೊಳ್ಳಲು ಗಂಭೀರ ಚಿಂತನೆ ನಡೆಸಿದ್ದಾರೆ ಅಂತಾ ಹೇಳಲಾಗ್ತಿದೆ. ಈ ಬಗ್ಗೆ ಕುಟುಂಬದವರೊಂದಿಗೆ ಚರ್ಚಿಸಲಿದ್ದಾರೆ. ಜೆಡಿಎಸ್‌ನಲ್ಲಿ ಕುಟುಂಬ ಸದಸ್ಯರಿಗೆ ಆದ್ಯತೆ ನೀಡಲಾಗುತ್ತಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವುದಕ್ಕೆ ನಿಖಿಲ್‌ ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನೂ ನಿಖಿಲ್​ ರಾಜೀನಾಮೆ ನೀಡಿದ ಬಳಿಕ ತೆರವಾಗುವ ಸ್ಥಾನವನ್ನು ಬೇರೊಬ್ಬರಿಗೆ ವಹಿಸುವ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆದಿದೆ. ಸಂಸದ ಪ್ರಜ್ವಲ್ ರೇವಣ್ಣಗೆ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ಸ್ಥಾನ ವಹಿಸುವ ಬಗ್ಗೆ ಚರ್ಚೆ ನಡೆದಿದೆ ಅಂತಾ ಕೇಳಿಬರ್ತಿದೆ.

ನಿಖಿಲ್​, ಪಕ್ಷೇತರವಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರೀಷ್​ ವಿರುದ್ಧ ಸೋಲುಂಡಿದ್ದರು. ಇದರ ನೋವಿನಿಂದ ಹೊರಬರಲು ನಿಖಿಲ್​ಗೆ ಹಲವು ದಿನಗಳು ಬೇಕಾಯಿತು. ಇದೀಗ ಮೇ 10ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.

Related Articles

- Advertisement -spot_img

Latest Articles