ಬೆಂಗಳೂರು: ಅನಾರೋಗ್ಯದಿಂದ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಅವರನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಹೆಚ್‌ಡಿಕೆ ಆರೋಗ್ಯ ವಿಚಾರಿಸಿದ ನಂತರ ಮಾತನಾಡಿದ ಶ್ರೀಗಳು, ‘ಕುಮಾರಸ್ವಾಮಿ ತುಂಬಾ ಚೆನ್ನಾಗಿದ್ದಾರೆ, ಅವರ ಆರೋಗ್ಯ ಸ್ಥಿರವಾಗಿದೆ. ಆರೋಗ್ಯದಲ್ಲಿ ಚೇತರಿಕೆಯಾಗಿದ್ದು ಯಾವುದೇ ತೊಂದರೆ ಇಲ್ಲ. ಚಿಕಿತ್ಸೆಗೆ ಸ್ಪಂದಿಸಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಐ ಸಿ ಯು ಇಂದ ವಾರ್ಡಗೆ ಶಿಫ಼್ಟ್ ಮಾಡುತ್ತಾರೆ. ಕೆಲ ದಿನ ವಿಶ್ರಾಂತಿ ಪಡೆಯುವಂತೆ ಸಲಹೆ ಕೊಟ್ಟಿದ್ದೇನೆ’ ಎಂದರು.
ಇದನ್ನೂ ಓದಿ; ಪತಿ ಹೆಚ್‌ಡಿಕೆ ಆರೋಗ್ಯವಾಗಿದ್ದಾರೆ: ಅನಿತಾ ಕುಮಾರಸ್ವಾಮಿ
ತೀವ್ರ ಜ್ವರದಿಂದ ನಿನ್ನೆ ಬೆಳಗ್ಗೆ 3:40ಕ್ಕೆ ಹೆಚ್ ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗಿದ್ದರು. ಹೆಚ್ ಡಿ ಕೆ ಆರೋಗ್ಯ ವಿಚಾರಿಸಲು ಅವರ ಕುಟುಂಬದವರು ಹಾಗೂ ಹಿತೈಶಿಗಳು ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ.
‘ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಟ್ವೀಟ್ ಮಾಡಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.