ಹುಬ್ಬಳ್ಳಿ: ಯಾವುದೇ ರೀತಿಯಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಕುಮ್ಮಕ್ಕು ಕೊಡುವ ಪ್ರಶ್ನೆಯೇ ಇಲ್ಲ. ನರೇಂದ್ರ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ಧಾರವಾಡ ಜಿಲ್ಲೆಯ ನರೇಂದ್ರ ಗ್ರಾಮದಲ್ಲಿ ಜೂಜಾಟದ ಅಡ್ಡೆ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಯಾರೇ ಆಗಿದ್ದರೂ ಅಕ್ರಮ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರೇ, ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾಗಿದ್ದರೇ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಅಂದು ಕೂಡ ಸ್ಪಷ್ಟ ಪಡಿಸಿದ್ದೇನೆ. ಇಂದು ಕೂಡ ಹೇಳುತ್ತಿದ್ದೇನೆ. ಯಾರೇ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರೇ ಸೂಕ್ತ ಕ್ರಮ ಜರುಗಿಸಿ ಎಂದಿದ್ದಾರೆ.
ಇದನ್ನೂ ಓದಿ: ವಿದ್ಯುತ್ ಕಳ್ಳತನ ಆರೋಪ: ಎಷ್ಟು ದಂಡ ಹಾಕ್ತಾರೋ ಕಟ್ತೀನಿ ಎಂದ ಹೆಚ್‌ಡಿಕೆ
ನರೇಂದ್ರ ಗ್ರಾಮದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆದಿರುವುದು ನಿಜಕ್ಕೂ ಖಂಡನೀಯವಾಗಿದೆ. ಈ ಬಗ್ಗೆ ಪೊಲೀಸರು ತಪ್ಪಿತಸ್ಥರನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಿ ಎಂದು ಅವರು ಹೇಳಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.