ಪೋಕ್ಸೋ ಕೇಸ್‌ನಲ್ಲಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ಬಿಗ್‌ಶಾಕ್..!

ಬೆಂಗಳೂರು : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್‌ ರದ್ದು ಇಲ್ಲ ಎಂದು ‌ಕರ್ನಾಟಕ ಹೈಕೋರ್ಟ್‌ ಹೇಳಿದೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿ ಎರಡನೇ ಬಾರಿ ಅಧೀನ ನ್ಯಾಯಾಲಯ ಹೊರಡಿಸಿರುವ ಆದೇಶ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ಪುರಸ್ಕರಿಸುವ ಪ್ರಶ್ನೆಯೇ ಇಲ್ಲ ಎಂದು ಹೈಕೋರ್ಟ್‌ ಹೇಳಿದೆ.

ಯಡಿಯೂರಪ್ಪ ಅವರ ಪರ ಹಿರಿಯ ವಕೀಲ ಸಿ.ವಿ.ನಾಗೇಶ್‌ ಅವರು, ಸಂತ್ರಸ್ತೆ ಮತ್ತು ಕೃತ್ಯ ನಡೆದ ಸ್ಥಳದಲ್ಲಿ ಹಾಜರಿದ್ದವರ ಹೇಳಿಕೆ ಮತ್ತು ಪ್ರತಿ ಹೇಳಿಕೆಯನ್ನು ಅಧೀನ ನ್ಯಾಯಾಲಯ ಪರಿಗಣಿಸಬೇಕಿತ್ತು ಎಂದು ವಾದ ಮಂಡಿಸಿದ್ದಾರೆ. ಇತರೆ ವಿಚಾರಗಳ ಕುರಿತು ಅವರು ವಾದಿಸಿಲ್ಲ. ಹೀಗಿರುವಾಗ ಅರ್ಜಿ ಪುರಸ್ಕರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಈ ಕುರಿತು ಉತ್ತರಿಸಲು ಸಿ.ವಿ.ನಾಗೇಶ್‌ ಅವರನ್ನು ಕರೆತನ್ನಿ ಎಂದು ವಿಚಾರಣೆ ವೇಳೆ ಯಡಿಯೂರಪ್ಪ ಪರ ಹಾಜರಿದ್ದ ವಕೀಲೆ ಸ್ವಾಮಿನಿ ಗಣೇಶ್‌ ಅವರಿಗೆ ಪೀಠ ಸೂಚಿಸಿದೆ

ಮೇಲಾಗಿ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂಬುದನ್ನು ಬಿಎಸ್‌ ಯಡಿಯೂರಪ್ಪ ಒಪ್ಪಿಕೊಂಡಿಲ್ಲ. ಸಂತ್ರಸ್ತೆಯ ಹೇಳಿಕೆಯನ್ನು ಮಾತ್ರ ಆಧರಿಸಿ ವಿಚಾರಣಾ ನ್ಯಾಯಾಲಯ ಕಾಗ್ನಿಜೆನ್ಸ್ ತೆಗೆದುಕೊಂಡಿರುವುದು ಕಾನೂನುಬಾಹಿರ ಎಂದು ಗುರುವಾರ ನಡೆದ ವಿಚಾರಣೆಯಲ್ಲಿ ವಕೀಲ ನಾಗೇಶ್‌ ಅವರು ಹೈಕೋರ್ಟ್‌ ವಾದ ಮಂಡಿಸಿದ್ದರು. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಸಿ.ವಿ.ನಾಗೇಶ್, ತಮ್ಮ ತಪ್ಪನ್ನು ವಿಡಿಯೋದಲ್ಲಿ ಬಿಎಸ್ ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆಂದು ಆರೋಪಿಸಲಾಗಿದೆ. ಆದರೆ, ಆ ಮಗು ನನ್ನ ಮೊಮ್ಮಗಳಿದ್ದಂತೆ ಎಂಬ ಉದ್ದೇಶದಿಂದ ಚೆಕ್ ಮಾಡಿದೆ ಎಂದು ಅವರು ಹೇಳಿದ್ದಾರೆ. ಹಳೆಯ ಪೋಕ್ಸೊ ಕೇಸ್ ಸಂಬಂಧ ನ್ಯಾಯ ಕೊಡಿಸುವಂತೆ ಬಂದಿದ್ದರು. ಆಗ ಮಹಿಳೆ ತನ್ನ ಮಗಳ ಬಗ್ಗೆ ಬೇಕಿದ್ದರೆ ಚೆಕ್ ಮಾಡಿಕೊಳ್ಳಿ ಎನ್ನುತ್ತಿದ್ದರು. ಅದನ್ನೇ ಚೆಕ್ ಮಾಡಿದೆ ಎಂದು ಬಿಎಸ್ ವೈ ಹೇಳಿದ್ದಾರೆ ಎಂದು ತಿಳಿಸಿದರು. ಅರ್ಜಿದಾರರು ಲೈಂಗಿಕ ದೌರ್ಜನ್ಯವನ್ನು ಒಪ್ಪಿಕೊಂಡಿಲ್ಲ. ಪ್ರಾಸಿಕ್ಯೂಷನ್ ವಾದದಲ್ಲಿ ಹುರುಳಿಲ್ಲ ಎಂದರು.

Leave a Reply

Your email address will not be published. Required fields are marked *