ಹಾಸನ: ಸರಕಾರ ಅಧಿಕಾರಕ್ಕೆ ಬಂದು 3 ತಿಂಗಳಾದರೂ ಯಾವುದೇ ಅಭಿವೃದ್ಧಿ ಕಾಮಗಾರಿಗಳು ಆಗುತ್ತಿಲ್ಲ ಎಂದು ಸಂಸದ ಪ್ರಜ್ವಲ್ ರೇವಣ್ಣ ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರದಿಂದ ರೈತರಿಗೆ-ಬಡ ಜನರಿಗೆ ಅನ್ಯಾಯ, ಧೋರಣೆ ಖಂಡಿಸಿ ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿ, ಹಾಸನ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಬೇಕು, 11500 ಕೋಟಿ Sc ಮತ್ತು ST ಮೀಸಲಿಟ್ಟ ಅನುದಾನ ಗ್ಯಾರಂಟಿ ಯೋಜನೆಗೆ ಅಳವಡಿಸಿಕೊಳ್ಳಲಾಗಿದೆ, ಗಂಗಾ ಕಲ್ಯಾಣ ಯೋಜನೆಯಲ್ಲಿ ಕೊರೆದ ಕೊಳವೆಬಾವಿಗಳಿಗೆ ಮೂರು ವರ್ಷಗಳಾದರೂ ವಿದ್ಯುತ್ ಒದಗಿಸಿರುವುದಿಲ್ಲ ಎಂದು ಆಕ್ರೋಶಿಸಿದರು.
ಇದನ್ನೂ ಓದಿ: ʼಕಾಂಗ್ರೆಸ್ ತತ್ತ್ವ, ಸಿದ್ದಾಂತ ನಂಬಿರೋರು ಪಕ್ಷ ಸೇರ್ತಿದ್ದಾರೆʼ
ಕಾಡಾನೆ ವಿಚಾರದಲ್ಲಿ ಹಾವಳಿ ತಪ್ಪಿಸಲು ಶಾಶ್ವತ ಪರಿಹಾರ ಕಂಡು ಹಿಡಿಯಬೇಕು, ರಾಜ್ಯ ಸರಕಾರ ತಮಿಳುನಾಡು ಮೆಚ್ವಿಸಲು ಕಾವೇರಿ ನೀರು ಹರಿಯುತ್ತಿದ್ದಾರೆ, ಉಚಿತ ವಿದ್ಯುತ್ ಕೊಡುವುದಾಗಿ ಹೇಳಿ ದಿನದ ಒಂದು ಗಂಟೆಗಳ ಕಾಲ ರೈತರಿಗೆ ವಿದ್ಯುತ್ ಕೊಡುತ್ತಿಲ್ಲ ಎಂದು ಕಿಡಿಕಾರಿದರು. ಮಳೆ ಕಡಿಮೆಯಿಂದ ವಿವಿಧ ಬೆಳೆಗಳು ಕುಂಠಿತಗೊಂಡಿದ್ದು, ಕೂಡಲೇ ಹಾಸನ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಬೇಕು ಎಂದು ವಿವರಿಸಿದರು.
ರಾಜ್ಯ ಸರಕಾರ ಕೇವಲ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಮುಂದಾಗಿದೆ. ರಾಜ್ಯದಲ್ಲಿ ವಾಡಿಕೆಗಿಂತ ಶೇ.60 ರಷ್ಟು ಮಳೆ ಕೊರತೆ ಆಗಿದೆ. ಏಪ್ರಿಲ್, ಮೇ, ಜೂನ್‌ನಲ್ಲಿ ಮಳೆ ಆಗಿಲ್ಲ. ಕಾಫಿ, ಮೆಕ್ಕೆಜೋಳ, ರಾಗಿ ಎಲ್ಲ ಬೆಳೆಗಳು ನಾಶವಾಗಿವೆ. ಸರಕಾರ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದರು. ಕೂಡಲೇ ಸಮರ್ಪಕ ವಿದ್ಯುತ್ ನೀಡಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯ ಹಲವು ಕಡೆಗಳಲ್ಲಿ ಟ್ರಾನ್ಸ್ಫರ್ಮರ್ ಕೊರತೆ ಇದ್ದು, ಪೂರೈಕೆ ಮಾಡುವಂತೆ ವಿವಿಧ ಗ್ರಾಪಂಯಿಂದ ಮನವಿ ಸಲ್ಲಿಸಿ ಹಲವು ತಿಂಗಳುಗಳೇ ಕಳೆದಿದ್ದರೂ, ಟಿಸಿ ಪೂರೈಕೆಯಾಗಿಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಕೇಳಿದರೆ ಅನುದಾನದ ಕೊರತೆಯಿಂದ ಸರ್ಕಾರದಿಂದಲೇ ಪೂರೈಕೆಯಾಗಿಲ್ಲ ಎಂದು ಹೇಳುತ್ತಿದ್ದಾರೆ. ಹೀಗಾದರೆ ಸಾಮಾನ್ಯ ಜನರು, ರೈತರು ಏನು ಮಾಡಬೇಕು ಎಂಬ ಪ್ರಶ್ನೆಗೆ ಆಳುವವರೇ ಉತ್ತರ ನೀಡಬೇಕಿದೆ ಎಂದು ಆಗ್ರಹಿಸಿದರು.
ನಾವು ರೈತರ ಪರ ಪ್ರತಿಭಟನೆ ಮಾಡುತ್ತಿರುವಾಗ ಅವರ ಕಷ್ಟ ಕೆಳಲು ಡಿಸಿಗೆ ಸೌಜ್ಯನತೆ ಇಲ್ಲವೇ? ಜೆಡಿಎಸ್ ಪ್ರತಿಭಟನೆ ವೇಳೆ ಮನವಿ ಸ್ವೀಕರಿಸಬಾರದು ಎಂದು ಜಿಲ್ಲಾಧಿಕಾರಿಗಳು ನೆಪ ಹೇಳಿ ಯಾವುದೋ ಸಭೆಗೆ ಹೋಗಿರುವುದಾಗಿ ಸಂಸದ ಪ್ರಜ್ವಲ್ ರೇವಣ್ಣ ಆಕ್ರೋಶವ್ಯಕ್ತಪಡಿಸಿದಲ್ಲದೇ ಡಿಸಿ ಪ್ರತಿಭಟನಾ ಸ್ಥಳಕ್ಕೆ ಬರುವವರೆಗೂ ನಾವು ಇಲ್ಲಿಂದ ಹೋಗುವುದಿಲ್ಲ ಎಂದು ಹಠ ಹಿಡಿದು ಕುಳಿತರು. ಕೆಲ ಸಮಯದಲ್ಲೆ ಡಿಸಿ ಸತ್ಯಭಾಮ ಅವರು ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದ ಪ್ರಸಂಗ ನಡೆಯಿತು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.