Sunday, March 26, 2023
spot_img
- Advertisement -spot_img

ಮುಂದಿನ ದಿನಗಳಲ್ಲಿ ಜನರ ಬಳಿಗೆ ಹೋಗುತ್ತೇನೆ, ರಾಜ್ಯದಲ್ಲಿ ಪಕ್ಷ ಬಲಪಡಿಸುವ ಕೆಲಸ ಮಾಡುತ್ತೇನೆ : ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ತಮ್ಮ ಸರ್ಕಾರ ಸುಭದ್ರವಾಗಿದ್ದು, ಭದ್ರವಾಗಿ ಮುಂದುವರೆಯಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ದಿನಗಳಲ್ಲಿ ಜನರ ಬಳಿಗೆ ಹೋಗುತ್ತೇನೆ ಮತ್ತು ರಾಜ್ಯದಲ್ಲಿ ಪಕ್ಷ ಬಲಪಡಿಸುವ ಕೆಲಸ ಮಾಡುತ್ತೇನೆ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವರದಿಗಳು ಆಧಾರ ರಹಿತ ಮತ್ತು ಸುಳ್ಳು ಎಂದರು.
ಇಂತಹ ವಿಚಾರಗಳ ಬಗ್ಗೆ ಚರ್ಚೆ ಮಾಡುವ ಬದಲು ಇನ್ನೂ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಹಾಗೂ ಪಕ್ಷ ಬಲಪಡಿಸಲು ಪ್ರತಿದಿನ 2 ಗಂಟೆ ಹೆಚ್ಚಿನ ಕೆಲಸ ಮಾಡುವುದಾಗಿ ತಿಳಿಸಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬೊಮ್ಮಾಯಿ, ಕಾಂಗ್ರೆಸ್ ವರು ಏನೋ ಅಂದುಕೊಂಡಿದ್ದಾರೆ. ಅವರ ಮನಸ್ಸಿನಲ್ಲಿ ಅತಂತ್ರ ಇದೆ. ಅದನ್ನು ರಾಜ್ಯದ ತುಂಬಾ ಜನರ ಮನಸ್ಸಿನಲ್ಲಿ ಹರಡಬೇಕೆಂದಿದ್ದಾರೆ. ಜನ ಯಾರೂ ಅದನ್ನು ನಂಬುವ ಸ್ಥಿತಿಯಲ್ಲಿ ಇಲ್ಲ. ಅದಕ್ಕಿಂತ ಹೆಚ್ಚಾಗಿ ನಾನು ಸ್ಥಿತಪ್ರಜ್ಞನಾಗಿದ್ದೇನೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಕಾಂಗ್ರೆಸ್ ಇದೇ ಮೊದಲ ಬಾರಿಗೆ ವದಂತಿ ಹರಡುತ್ತಿಲ್ಲ ಎಂದರು.

ನಮ್ಮ ಎಲ್ಲಾ ಮುಖಂಡರು ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ, ಕಾರ್ಯಕರ್ತರನ್ನು ಭೇಟಿ ಮಾಡುತ್ತೇವೆ. ಬೂತ್ ಮಟ್ಟದಲ್ಲಿ ಪಕ್ಷ ಬಲಪಡಿಸುತ್ತೇವೆ ಎಂದು ಹೇಳಿದರು. ರಾಜ್ಯದ ಮುಖ್ಯಮಂತ್ರಿ ಆಗಿ ಬಸವರಾಜ ಬೊಮ್ಮಾಯಿ ಅವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ನಾಯಕತ್ವದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಹಿಂದೆಯೂ ಹೇಳಿದ್ದರು.

Related Articles

- Advertisement -

Latest Articles