Wednesday, November 29, 2023
spot_img
- Advertisement -spot_img

ವಿಡಿಯೋ ವೈರಲ್ ಬಗ್ಗೆ ಸ್ಪಷ್ಟೀಕರಣ ಕೊಡುವ ಅಗತ್ಯವಿಲ್ಲ: ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ವಿಡಿಯೋ ವೈರಲ್ ಬಗ್ಗೆ ಸ್ಪಷ್ಟೀಕರಣ ಕೊಡುವ ಅಗತ್ಯವೇ ಇಲ್ಲ, ನಾನು ಹತ್ತಾರು ವಿಚಾರಗಳ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ. ಈಗ ನಾನು ದುಡ್ಡಿನ ವಿಚಾರ ಮಾತನಾಡಿದರೆ ಸ್ಪಷ್ಟನೆ ಕೊಡಬಹುದಿತ್ತು. ಆದರೂ ಸ್ಪಷ್ಟೀಕರಣ ಕೊಡುತ್ತಿದ್ದೇನೆ. ನಾನು ಅವತ್ತು ಮಾತನಾಡಿರುವುದು ಸಿ.ಎಸ್.ಆರ್ ಫಂಡಿನ ಬಗ್ಗೆ ಎಂದು ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಕಲೆಕ್ಷನ್‌ ಪ್ರಿನ್ಸ್‌ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ 48 ಗಂಟೆಯಲ್ಲಿ ವರ್ಗ: ಸಿಎಂ ಕಟುವಾಗಿ ಟೀಕಿಸಿದ ಹೆಚ್’ಡಿಕೆ

ವಿಡಿಯೋ ವೈರಲ್ ಬಳಿಕ ಮೊದಲ ಬಾರಿಗೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಡಾ.ಯತೀಂದ್ರ ಸಿದ್ದರಾಮಯ್ಯ, ಲಿಸ್ಟ್ ಎಂದ ಕೂಡಲೇ ವರ್ಗಾವಣೆ ಎಂದು ಹೇಗೆ ಹೇಳುತ್ತಾರೆ. ಹಿಂದಿನ ಸರ್ಕಾರದವರು ಅವಧಿಯಲ್ಲಿ ಮಾಡಿದ ವರ್ಗಾವಣೆ ಎಲ್ಲವೂ ದಂಧೆಯ ಅವರು ಹಣ ಪಡೆದು ವರ್ಗಾವಣೆ ಮಾಡಿದ್ದಾರಾ ? ಆಡಳಿತಾತ್ಮಕವಾಗಿ ವರ್ಗಾವಣೆ ಮಾಡಿದ್ರೆ ತಪ್ಪೇನು? ಪ್ರಶ್ನಿಸಿದರು.

ಎಲ್ಲ ವರ್ಗಾವಣೆಯನ್ನು ಹಣದ ದೃಷ್ಟಿಯಲ್ಲಿ ನೋಡಿದ್ರೆ ಹೇಗೆ ಆರೋಪಗಳನ್ನು ಮಾಡುವಾಗ ದಾಖಲೆ ಇಟ್ಟು ಆರೋಪ ಮಾಡಲಿ. ದಾಖಲೆ ಇಲ್ಲದೆ ಸುಖಾ ಸುಮ್ಮನೆ ಆರೋಪ ಮಾಡಬೇಡಿ ನನ್ನ ಪಾಡಿಗೆ ನಾನು ಕ್ಷೇತ್ರದ ಕೆಲಸ ಮಾಡುತ್ತಿದ್ದೇನೆ. ಅನಗತ್ಯವಾಗಿ ಎಲ್ಲಾ ವಿಚಾರಕ್ಕೆ ನನ್ನ ಹೆಸರನ್ನು ತೆಗೆಯಬೇಡಿ ಎಂದು ಖಡಕ್ ಆಗಿ ಹೇಳಿದ್ದಾರೆ.

ಇದನ್ನೂ ಓದಿ: ಯಾವುದೇ ವ್ಯಕ್ತಿ, ಪಕ್ಷದ ಶಾಸಕರ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ: ತೆಲಂಗಾಣದಲ್ಲಿ ಅಬ್ಬರದ ಭಾಷಣಕ್ಕೆ ಸಚಿವ ಜಮೀರ್ ಸ್ಪಷ್ಟನೆ

ವಿವೇಕಾನಂದ ಯಾರು? ಅದು ನನಗೆ ಈಗಲೂ ಗೊತ್ತಿಲ್ಲ, ವಿವೇಕಾನಂದ ಟ್ರಾನ್ಸ್ಫರ್ ಎಲ್ಲಿಗೆ ಆಗಿದೆ? ಅದು ಯಾವ ಕ್ಷೇತ್ರ ಅದರ ಬಗ್ಗೆ ಕ್ಷೇತ್ರದ ಶಾಸಕರನ್ನು ಕೇಳಿಕೊಳ್ಳಿ. ಅದಕ್ಕೂ ನನಗೂ ಏನು ಸಂಬಂಧ? ನಾನು ಮಾತನಾಡಿರುವುದು ಬಿಇಒ ವಿವೇಕಾನಂದ ಬಗ್ಗೆ ಪೊಲೀಸರ ವರ್ಗಾವಣೆ ಬಗ್ಗೆ ನನಗೆ ಗೊತ್ತಿಲ್ಲ ಎಂದರು. ತಂದೆಯವರ ವಿಚಾರದಲ್ಲಿ ಕುಮಾರಸ್ವಾಮಿ ಏನೂ ಆರೋಪ ಮಾಡಲು ಆಗುತ್ತಿಲ್ಲ. ಹೀಗಾಗಿ ಸಿಎಂ ಕುಟುಂಬವನ್ನು ಸಿಲುಕಿಸುವ ಯತ್ತ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles