Friday, September 29, 2023
spot_img
- Advertisement -spot_img

ದೇಶದ ಹೆಸರು ಬದಲಾಯಿಸುವ ಹಕ್ಕು ಯಾರಿಗೂ ಇಲ್ಲ: ಶರದ್ ಪವಾರ್

ಮುಂಬೈ: ಜಿ20 ಔತಣಕೂಟದ ಆಹ್ವಾನ ಪತ್ರದಲ್ಲಿ ರಾಷ್ಟ್ರಪತಿಯನ್ನು ‘ಭಾರತದ ಅಧ್ಯಕ್ಷರು’ ಎಂದು ಉಲ್ಲೇಖಿಸಲಾಗಿದೆ ಎಂದು ಕಾಂಗ್ರೆಸ್ ಪ್ರತಿಪಾದಿಸಿದ ನಂತರ, ‘ರಾಷ್ಟ್ರದ ಹೆಸರನ್ನು ಬದಲಾಯಿಸುವ ಹಕ್ಕು ಯಾರಿಗೂ ಇಲ್ಲ’ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಎದುರಿಸಲು ಒಟ್ಟಾಗಿರುವ 28 ವಿರೋಧ ಪಕ್ಷವಾದ ‘ಇಂಡಿಯಾ’ ಮೈತ್ರಿಕೂಟದ ಭಾಗವಾಗಿರುವ ಪಕ್ಷಗಳ ಮುಖ್ಯಸ್ಥರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಕರೆದಿದ್ದಾರೆ. ಅಲ್ಲಿ ಈ ವಿಷಯದ ಬಗ್ಗೆ ಚರ್ಚೆ ನಡೆಯಲಿದೆ’ ಎಂದು ಶರದ್ ಪವಾರ್ ಹೇಳಿದ್ದಾರೆ.

ಇದನ್ನೂ ಓದಿ: ‘ಭಾರತವನ್ನು ಬದಲಿಸುತ್ತೇನೆ ಎಂದ ಬಿಜೆಪಿ ಬದಲಿಸಿದ್ದು ಹೆಸರು ಮಾತ್ರ’

‘ದೇಶಕ್ಕೆ ಸಂಬಂಧಿಸಿದ ಹೆಸರಿನ ಬಗ್ಗೆ ಆಡಳಿತ ಪಕ್ಷವು ಏಕೆ ಗೊಂದಲಕ್ಕೊಳಗಾಗುತ್ತದೆ ಎಂದು ನನಗೆ ಅರ್ಥವಾಗುತ್ತಿಲ್ಲ’ ಎಂದ ಅವರು, ಸಂವಿಧಾನದಲ್ಲಿ ಭಾರತದ ಹೆಸರನ್ನು ಬದಲಾಯಿಸಲು ಅವಕಾಶ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಪವಾರ್, ‘ಅದರ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ’ ಎಂದರು.

‘ಮಲ್ಲಿಕಾರ್ಜುನ ಖರ್ಗೆ ಅವರು ಇಂಡಿಯಾ ಮೈತ್ರಿಕೂಟದ ಎಲ್ಲ ಪಕ್ಷದ ಮುಖ್ಯಸ್ಥರ ಸಭೆ ಕರೆದಿದ್ದಾರೆ. ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ. ದೇಶದ ಹೆಸರನ್ನು ಬದಲಾಯಿಸುವ ಹಕ್ಕು ಯಾರಿಗೂ ಇಲ್ಲ. ಯಾರೂ ಹೆಸರನ್ನು ಬದಲಾಯಿಸಲು ಸಾಧ್ಯವಿಲ್ಲ’ ಎಂದು ಹೇಳಿದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles