ಬೆಳಗಾವಿ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರದಲ್ಲಿದ್ದು, ಈ ಸಂದರ್ಭದಲ್ಲಿ ಸಿಡಿ ವಿಚಾರ ಮುಂದುವರೆಸಬೇಡಿ ಎಂದು ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕರಣ ಇಲ್ಲಿಗೇ ಬಿಟ್ಟುಬಿಡಿ, 3 ತಿಂಗಳಿನಲ್ಲಿ ಚುನಾವಣೆ ಎದುರಾಗಲಿದೆ. ಸಿಡಿ ಪ್ರಕರಣವನ್ನು ಮುಂದಿಟ್ಟುಕೊಂಡು ಸಾರ್ವಜನಿಕವಾಗಿ ಟೀಕೆ ಮಾಡುವುದನ್ನು ಮೂವರು ನಾಯಕರು ನಿಲ್ಲಿಸಬೇಕು. ಎಲ್ಲರೂ ದೊಡ್ಡ ಮಟ್ಟಕ್ಕೆ ಬೆಳೆದಿದ್ದೀರಿ, ಇನ್ನೂ ಎತ್ತರಕ್ಕೆ ಬೆಳೆಯಬೇಕು. ನಾವೆಲ್ಲರು ಸೇರಿ ರಾಜಕೀಯವಾಗಿ ಹೋರಾಟ ಮಾಡೋಣ. ಜನರಿಗೆ ಯಾರ ಮೇಲೆ ಪ್ರೀತಿ ಇದೆಯೋ ಅವರಿಗೆ ಮತ ನೀಡುತ್ತಾರೆಂದು ಹೇಳಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹಮಂತ್ರಿ ಆರಗ ಜ್ಞಾನೇಂದ್ರ ಆಹ್ವಾನಿಸಿದರೆ ಒಂದು ಕೊಠಡಿಯಲ್ಲಿ ಕುಳಿತು ಚರ್ಚೆ ಮಾತಾಡುತ್ತೇವೆ. ಇದನ್ನ ಸಾರ್ವಜನಿಕವಾಗಿ ಟೀಕೆ ಮಾಡುವುದನ್ನ ಮೂರು ಜನ ನಿಲ್ಲಿಸಬೇಕು ಎಂದರು. ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿಯವರು ಜಿದ್ದಾಜಿದ್ದಿಗೆ ಬಿದ್ದಿದ್ದಾರೆ. ಮೇಲಿಂದ ಮೇಲೆ ಗಂಭೀರ ಆರೋಪ ಮಾಡುತ್ತಿದ್ದಾರೆ. ಚುನಾವಣೆ ಸನೀಹದಲ್ಲಿರುವಾಗ ಇದೆಲ್ಲ ಬೇಡ, ಕೆಲಸದ ಬಗ್ಗೆ ಗಮನಹರಿಸಿ ಎಂದರು.