Monday, March 27, 2023
spot_img
- Advertisement -spot_img

ಗಡಿ ವಿಚಾರದಲ್ಲಿ ರಾಜಕೀಯ ಬೇಡ : ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ

ಮುಂಬೈ: ಗಡಿ ವಿಚಾರದಲ್ಲಿ ರಾಜಕೀಯ ಬೇಡ ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಇದೇ ಮೊದಲ ಬಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕ- ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಿದ್ದಾರೆ.

ಗಡಿಭಾಗದ ಜನರೊಂದಿಗೆ ನಾವು ನಿಲ್ಲಬೇಕು ಎಂದಿದ್ದಾರೆ. ಮಹಾರಾಷ್ಟ್ರದ ಗಡಿ ಗ್ರಾಮಗಳಲ್ಲಿ ಮೂಲ ಸೌಕರ್ಯ ಕಲ್ಪಿಸುವ ಕೆಲಸ ಮಾಡುತ್ತಿದ್ದೇವೆ. ಈ ಹಿಂದೆ ಕೆಲ ಗಡಿ ಗ್ರಾಮಗಳ ನೀರಿನ ಸಮಸ್ಯೆ ನೀಗಿಸಿದ್ದೇವೆ. ಮೊದಲ ಬಾರಿಗೆ ಅದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ನಾವು ಗಡಿ ನಿವಾಸಿಗಳೊಂದಿಗೆ ದೃಢವಾಗಿ ನಿಲ್ಲುತ್ತೇವೆ ಎಂದಿದ್ದಾರೆ.

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಸುಪ್ರೀಂಕೋರ್ಟ್ ತೀರ್ಪು ನೀಡುವವರೆಗೆ ಉಭಯ ರಾಜ್ಯಗಳು ಪರಸ್ಪರ ಹಕ್ಕು ಸಾಧಿಸುವುದಿಲ್ಲ ಎಂದು ಹೇಳಿದರು. ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿ ವಿಚಾರವಾಗಿ ನಡೆದ ಸಭೆ ಸಕಾರಾತ್ಮಕ ವಾತಾವರಣದಲ್ಲಿ ನಡೆದಿದೆ ಎಂದು ಹೇಳಿದರು.

ಡಿಸೆಂಬರ್ 14 ರಂದು ಮಹಾರಾಷ್ಟ್ರ-ಕರ್ನಾಟಕ ಗಡಿ ಸಮಸ್ಯೆಗೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೊಂದಿಗೆ ಅಮಿತ್ ಶಾ ಸಭೆ ನಡೆಸಿದ್ದರು.

Related Articles

- Advertisement -

Latest Articles