ಮಂಡ್ಯ : ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ.
ಸಮಿತಿ ಆದೇಶದ ಬೆನ್ನಲ್ಲೇ ಮಂಡ್ಯದಲ್ಲಿ ಮತ್ತೆ ಕಾವೇರಿ ಕಿಚ್ಚು ಹೊತ್ತಿಕೊಳ್ಳುವ ಸಾಧ್ಯತೆ ಇದೆ. ಆದೇಶಕ್ಕೆ ರೈತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ರೈತಸಂಘ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಪ್ರತಿಭಟನೆಗೆ ನಿರ್ಧರಿಸಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ತಡೆ ಮಾಡಲು ನಿರ್ಧರಿಸಿದ್ದಾರೆ ಎಂದು ಮೂಲಗಳು ಹೇಳಿವೆ.
ಸಮಿತಿಯು ಮತ್ತೆ ಕರ್ನಾಟಕದ ವಿರುದ್ಧವಾಗಿಯೇ ಸೂಚನೆ ನೀಡಿದೆ ಎಂದು ರೈತ ಸಂಘ ಆಕ್ರೋಶ ವ್ಯಕ್ತಪಡಿಸಿದ್ದು, ಮತ್ತೆ ನೀರು ಬಿಡದಂತೆ ನಿರಂತರ ಧರಣಿ ನಡೆಸಲು ನಿರ್ಧರಿಸಿದೆ. ನೀರು ಬಿಟ್ಟರೆ, ಬೃಹತ್ ಹೋರಾಟ ಮಾಡುವ ಎಚ್ಚರಿಕೆಯನ್ನೂ ರೈತಸಂಘ ನೀಡಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.