Monday, December 4, 2023
spot_img
- Advertisement -spot_img

NWKRTC ಬಸ್‌ಗಳಲ್ಲೂ ಟಿಕೆಟ್‌ಗೆ UPI ವ್ಯವಸ್ಥೆ!

ಬೆಂಗಳೂರು: ಸಾರಿಗೆ ಇಲಾಖೆಯು ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಇನ್ನು ಮುಂದೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಬಸ್‌ಗಳಲ್ಲಿ ಟಿಕೆಟ್‌ ಖರೀದಿಸಲು UPI ಮೂಲಕ ಹಣ ಪಾವತಿ ಮಾಡುವ ವ್ಯವಸ್ಥೆ ಜಾರಿ ಮಾಡಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಬಸ್ ಟಿಕೆಟ್‌ಗಳಿಗೆ ನಗದು ರಹಿತ ವಹಿವಾಟುಗಳನ್ನು ಉತ್ತೇಜಿಸಲು ಪ್ರಾಯೋಗಿಕ ಆಧಾರದ ಮೇಲೆ UPI ಆಧಾರಿತ ಪಾವತಿಗಳನ್ನು ಪ್ರಾರಂಭಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಸದ್ಯ ಈ ಡಿಜಿಟಲ್‌ ಪಾವತಿ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ NWKRTC ಬಸ್‌ಗಳಲ್ಲಿ ಮಾತ್ರ ಜಾರಿ ಮಾಡಲಾಗಿದ್ದು, ಒಂದು ವೇಳೆ ಇದು ಯಶಸ್ವಿಯಾದರೆ, ಉಳಿದ ನಿಗಮಗಳಿಗೂ ಡಿಜಿಟಲ್‌ ಪಾವತಿ ವ್ಯವಸ್ಥೆ ಅನುಷ್ಠಾನಗೊಳ್ಳುವ ಸಾಧ್ಯತೆ ಇದೆ. ಬೆಂಗಳೂರು ಬಿಎಂಟಿಸಿಯಲ್ಲಿ ಈಗಾಗಲೇ ಈ ವ್ಯವಸ್ಥೆ ಚಾಲ್ತಿಯಲ್ಲಿದೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles