ಬೆಂಗಳೂರು: ಸಿದ್ದರಾಮಯ್ಯ ಸಂಪುಟ ದರ್ಜೆ ಸಚಿವರಾಗಿ 8 ಮಂದಿ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದರು.
ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರ ಸಂಪುಟ ದರ್ಜೆ ಸಚಿವರಾಗಿ ಪರಮೇಶ್ವರ್, ಪ್ರಿಯಾಂಕ ಖರ್ಗೆ, ಜಮೀರ್ ಅಹಮದ್, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಕೆ.ಎಚ್.ಮುನಿಯಪ್ಪ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಇವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು. ಸಮಾರಂಭದಲ್ಲಿ ಪ್ರಮುಖವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್, ತಮಿಳುನಾಡು ಸಿಎಂ ಸ್ಟಾಲಿನ್ ಅನೇಕ ಗಣ್ಯರು ಭಾಗಿಯಾಗಿದ್ದರು.
ನಂತರ ಪ್ರಮಾಣ ವಚನ ಸ್ವೀಕರಿಸಿದ ಎಲ್ಲ ಗಣ್ಯರಿಗೆ , ಸಿಎಂ ಸಿದ್ದರಾಮಯ್ಯ, ಡಿಕೆಶಿವಕುಮಾರ್ ಹೂಗುಚ್ಛ ನೀಡಿ ಅಭಿನಂದಿಸಿದರು. ಸಿದ್ದು ಸಂಪುಟ ರಚನೆ ಬಗ್ಗೆ ತಡರಾತ್ರಿವರೆಗೂ ಹೈಕಮಾಂಡ್ ಜೊತೆಗೆ ಮೀಟಿಂಗ್ ನಡೆದಿದ್ದು, ಮೊದಲ ಹಂತದಲ್ಲಿ ಎಂಟು ಶಾಸಕರನ್ನು ಸಚಿವರಾಗಿ ಆಯ್ಕೆ ಮಾಡಲಾಗಿದೆ.