ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಉಪಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ವೇದಿಕೆಗೆ ಆಗಮನಿಸಿದ್ದು, ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಿದ್ದರಾಮಯ್ಯಗೆ ಪ್ರತಿಜ್ಞಾವಿಧಿ ಬೋಧಿಸಿದ್ದು ದೇವರ ಹೆಸರಿನಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸಿದರು.
ಇನ್ನೂ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದ್ದು ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭ ನಡೆಯುತ್ತಿದ್ದು ಸಚಿವರಾಗಿ ಡಾ.ಜಿ.ಪರಮೇಶ್ವರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧನೆ ಮಾಡಿದ್ದು ಡಾ.ಪರಮೇಶ್ವರ್ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇನ್ನೂ ನಟಿ ರಮ್ಯ, ಶಿವರಾಜ್ ಕುಮಾರ ದಂಪತಿ, ಎಂಕೆ ಸ್ಟಾಲಿನ್, ಕಮಲ್ ಹಾಸನ್, ದುನಿಯಾ ವಿಜಯ್, ಕಾಶ್ಮೀರ ಮಾಜಿ ಸಿಎಂ ಮೆಹಬೂಬು ಮುಫ್ತಿ ಸೇರಿ ಹಲವು ಗಣ್ಯರು , ಸಿನೆಮಾ ತಾರೆಯರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ.