Monday, December 11, 2023
spot_img
- Advertisement -spot_img

ಐಎಎಸ್ ಅಧಿಕಾರಿಗಳು ರಾಜಕೀಯ ಹಿತಾಸಕ್ತಿಯ ಪರ ಕೆಲ್ಸ ಮಾಡ್ಬಾರ್ದು: ಸಚಿವ ಮಹದೇವಪ್ಪ

ಮೈಸೂರು: ನಿನ್ನೆ ನಗರದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಜಯಂತಿ ಕಾರ್ಯಕ್ರಮ ಇತ್ತು. ರಾಜ್ಯಪಾಲರು, ಕೇಂದ್ರ ಸರ್ಕಾರದ ಅಧಿಕಾರಿಗಳು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಕಚೇರಿಗೂ ಮಾಹಿತಿ ಇಲ್ಲ. ಜಿಲ್ಲಾ ಉಸ್ತುವಾರಿ ಸಚಿವನಾದ ನನಗು ಮಾಹಿತಿ ನೀಡಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಆರೋಪ ಮಾಡಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ 250 ರಿಂದ 300 ಅಧಿಕಾರಿಗಳ ದುರ್ಬಳಕೆ ನಡೆಯುತ್ತಿದೆ. ಪ್ರಚಾರಕ್ಕಾಗಿ ಅಧಿಕಾರಿಗಳ ನಿಯೋಜನೆಯಾಗಿದೆ. ಗಣತಂತ್ರ ವ್ಯವಸ್ಥೆ ದುರ್ಬಲಗೊಳಿಸಲಾಗುತ್ತಿದೆ. ಆಡಳಿತ ವೈಫಲ್ಯಗಳನ್ನು ಮರೆ ಮಾಚಲಾಗಿದೆ. ಅಖಿಲ ಭಾರತ ಸೇವೆಯ ಅಧಿಕಾರಿಗಳು(ಐಎಎಸ್) ಹಿತಾಸಕ್ತಿಯ ಪರವಾಗಿ ಕೆಲಸ ಮಾಡಬಾರದು ಎಂದು ಕಿವಿಮಾತು ಹೇಳಿದ್ದಾರೆ.

ಇದನ್ನೂ ಓದಿ: ವಾಹನ ಸವಾರರಿಗೆ ಸಿಹಿ ಸುದ್ದಿ: HSRP ನಂಬರ್ ಪ್ಲೇಟ್ ನೊಂದಣಿಗೆ ಅವಧಿ ವಿಸ್ತರಣೆ

ಕೇಂದ್ರ ಸರ್ಕಾರ ಲೋಕಸಭೆ ಚುನಾವಣೆಗಾಗಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಅನೇಕ ಯೋಜನೆಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನವಿರುತ್ತೆ. ರಾಜ್ಯ ಸರ್ಕಾರವನ್ನು ಕಡೆಗಣಿಸಿ ಕೇಂದ್ರ ಸರ್ಕಾರ ಪ್ರಚಾರ ಗಿಟ್ಟಿಸಿಕೊಳ್ಳಲು ಮುಂದಾಗಿದೆ. ಇದು ಗಣತಂತ್ರ ವ್ಯವಸ್ಥೆಗೆ ವಿರುದ್ಧವಾದದ್ದು. ಬಿರ್ಸಾ ಮುಂಡಾ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ವಿಚಾರವಾಗಿ ರಾಷ್ಟ್ರಪತಿಗಳಿಗೆ ಪತ್ರ ಬರೆಯುತ್ತೇನೆ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ವಿಡಿಯೋ ವೈರಲ್ ವಿಚಾರವಾಗಿ ಮಾತನಾಡಿದ ಅವರು, ಆ ವಿಡಿಯೋ ನೋಡಿಲ್ಲ. ವರ್ಗಾವಣೆ ಮಾಡೋದು ಮುಖ್ಯಮಂತ್ರಿಯವರ ಪರಮಾಧಿಕಾರ. ಯಾರು ಏನೇ ಹೇಳಬಹುದು. ವರ್ಗಾವಣೆಯಲ್ಲಿ ಯಾರೂ ಹಸ್ತಕ್ಷೇಪ ಮಾಡಲು ಅವಕಾಶ ಇಲ್ಲ. ಆ ರೀತಿ ಪ್ರಕರಣ ನಡೆದಿದ್ದರೆ, ಕಾನೂನು ತನ್ನ ಕ್ರಮ ನಿರ್ವಹಿಸುತ್ತದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ನನಗೆ ಎರಡ್ಮೂರು ಸಾವಿರಕ್ಕೆ ಕರೆಂಟ್ ಕದಿಯೋ ದಾರಿದ್ರ್ಯ ಬಂದಿಲ್ಲ: ಕುಮಾರಸ್ವಾಮಿ

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles