ಬೆಂಗಳೂರು: ರಾಜ್ಯದಲ್ಲಿ ಇದುವರೆಗೂ ಯಾವುದೇ ನಿಪಾ ಪ್ರಕರಣಗಳು ಪತ್ತೆಯಾಗಿಲ್ಲ. ಆದರೆ ಕೇರಳದ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಿದ್ದೇನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಕೇರಳದ ಕೋಝಿಕ್ಕೋಡ್‌ನಲ್ಲಿ ಮತ್ತೊಬ್ಬರಿಗೆ ನಿಫಾ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಕೇರಳ ಆರೋಗ್ಯ ಸಚಿವರ ಕಚೇರಿ ದೃಢಪಡಿಸಿದೆ. ಸೋಂಕು ತಗುಲಿರುವ 39 ವರ್ಷದ ವ್ಯಕ್ತಿಯನ್ನು ಕೋಝಿಕ್ಕೋಡ್‌ನ ಆಸ್ಪತ್ರೆಯಲ್ಲಿ ನಿಗಾ ಇರಿಸಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : MLAs salaries : ಶಾಸಕರಿಗೆ ಅತೀ ಹೆಚ್ಚು ಸಂಬಳ ನೀಡುವ ರಾಜ್ಯ ಜಾರ್ಖಂಡ್ : ಕರ್ನಾಟದಲ್ಲಿ ಎಷ್ಟಿದೆ ಗೊತ್ತಾ?
ಈ ಬಗ್ಗೆ ಟ್ವೀಟ್ (ಎಕ್ಸ್) ಮಾಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಆದರೆ ಆತಂಕ ಪಡುವ ಅಗತ್ಯವಿಲ್ಲ. ಆರೋಗ್ಯ ಇಲಾಖೆಯು ಎಲ್ಲಾ ಮುಂಜಾಗೃತ ಕ್ರಮಗಳನ್ನು ಕೈಗೊಂಡಿದೆಈ ಎಂದು ಹೇಳಿದ್ದಾರೆ.


ಕರ್ನಾಟಕ – ಕೇರಳ ಗಡಿ ಜಿಲ್ಲೆಗಳಲ್ಲಿ ಹೈ ಅಲರ್ಟ್ :
ಪಕ್ಕದ ರಾಜ್ಯ ಕೇರಳ ರಾಜ್ಯದಲ್ಲಿ ನಿಫಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ರಾಜ್ಯ ಸರ್ಕಾರ ಸಾರ್ವಜನಿಕರಿಗೆ ಸಲಹೆ-ಸೂಚನೆಗಳನ್ನು ಹೊರಡಿಸಿದೆ.
ಇದನ್ನೂ ಓದಿ : ದೆಹಲಿ ಅಬಕಾರಿ ನೀತಿ ಹಗರಣ; ED ನೋಟಿಸ್ ಅಲ್ಲ ಮೋದಿ ನೋಟಿಸ್ ಸ್ವೀಕರಿಸಿದ್ದೇನೆ: ಕವಿತಾ
ಕೇರಳದಲ್ಲಿ ಸೋಂಕು ಪೀಡಿತ ಪ್ರದೇಶಗಳಿಗೆ ಜನರು ಅನಗತ್ಯವಾಗಿ ಪ್ರಯಾಣಿಸದಂತೆ ಸರ್ಕಾರ ಸೂಚಿಸಿದ್ದು, ಗಡಿ ಜಿಲ್ಲೆಗಳಾದ ಕೊಡಗು, ದಕ್ಷಿಣ ಕನ್ನಡ, ಮೈಸೂರು, ಚಾಮರಾಜನಗರಗಳಲ್ಲಿ ತೀವ್ರ ಕಟ್ಟೆಚ್ಚರ, ತಪಾಸಣೆ, ಕಣ್ಗಾವಲನ್ನು ಹೆಚ್ಚಿಸಲಾಗಿದೆ. ಕರ್ನಾಟಕಕ್ಕೆ ಪ್ರವೇಶಿಸುವ ಕೇರಳದ ಗಡಿಭಾಗಗಳಲ್ಲಿ ತಪಾಸಣೆ ಹೆಚ್ಚಿಸಲಾಗಿದೆ ಎಂದು ಕರ್ನಾಟಕ ಆರೋಗ್ಯ ಇಲಾಖೆಯ ಅಧಿಸೂಚನೆ ತಿಳಿಸಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.