Wednesday, November 29, 2023
spot_img
- Advertisement -spot_img

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಾಯೋಗಿಕವಲ್ಲ: ತರೂರ್

ತಿರುವನಂತಪುರ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪ್ರಸ್ತಾಪವನ್ನು ಟೀಕಿಸಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, ದೇಶದಲ್ಲಿ ಅಂತಹ ವ್ಯವಸ್ಥೆಯನ್ನು ಜಾರಿಗೆ ತರಲು ಯಾವುದೇ ಪ್ರಾಯೋಗಿಕ ಮಾರ್ಗವಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಶುಕ್ರವಾರ ಇಲ್ಲಿ ಮಾತನಾಡಿದ ತರೂರ್, ‘ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಉಪಕ್ರಮವು ಸಂಸದೀಯ ಪ್ರಜಾಪ್ರಭುತ್ವವನ್ನು ಆಧರಿಸಿದ ಅಸ್ತಿತ್ವದಲ್ಲಿರುವ ವ್ಯವಸ್ಥೆಗೆ ವಿರುದ್ಧವಾಗಿದೆ. ಒಕ್ಕೂಟ ವ್ಯವಸ್ಥೆಯ ರಾಜ್ಯಗಳು ಸದನದಲ್ಲಿ ಬಹುಮತ ಕಳೆದುಕೊಂಡರೆ ಪಕ್ಷಗಳು ಅಧಿಕಾರದಲ್ಲಿ ಮುಂದುವರಿಯಲು ಸಾಧ್ಯವಿಲ್ಲ; ಆಗ ಚುನಾವಣೆ ಅನಿವಾರ್ಯ’ ಎಂದು ವಿವರಿಸಿದರು.

ಇದನ್ನೂ ಓದಿ; ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ: ಎನ್‌ಸಿಡಬ್ಲ್ಯೂ ಖಂಡನೆ, ರಾಜಸ್ಥಾನ ಪೊಲೀಸರಿಗೆ ನೋಟಿಸ್

‘ದೇಶದ ಮುಖ್ಯ ಕಾರ್ಯನಿರ್ವಾಹಕರನ್ನು ಸಂಸದೀಯ ಬಹುಮತ ಮತ್ತು ಶಾಸಕಾಂಗ ಬಹುಮತದಿಂದ ಆಯ್ಕೆ ಮಾಡಲಾಗುತ್ತದೆ. ಬಹುಮತ ಇಲ್ಲದಿದ್ದರೆ ಆ ಕ್ಷಣದ ಕಾರಣಕ್ಕಾಗಿ ಸರ್ಕಾರ ಪತನಗೊಳ್ಳುತ್ತದೆ. ನಂತರ, ಕ್ಯಾಲೆಂಡರ್ನೊಂದಿಗೆ ಸಿಂಕ್ ಆಗದೆ ಹೊಸ ಚುನಾವಣೆಯನ್ನು ನಡೆಸಬೇಕಾಗುತ್ತದೆ. 1947 ಮತ್ತು 1967 ರ ನಡುವೆ, ಭಾರತದಲ್ಲಿ ಒಂದೇ ದಿನಾಂಕದಂದು ಎಲ್ಲ ರಾಷ್ಟ್ರೀಯ ಮತ್ತು ರಾಜ್ಯ ಚುನಾವಣೆಗಳು ನಡೆದವು. ಆದರೆ, 1967 ರಲ್ಲಿ ಕೇಂದ್ರದ ಸಮ್ಮಿಶ್ರ ಸರ್ಕಾರ ಪತನಗೊಂಡಾಗ ಇಂದು ರಾಷ್ಟ್ರ, ಒಂದು ಚುನಾವಣೆ ವ್ಯವಸ್ಥೆಯು ಕುಸಿದಿದೆ’ ಎಂದು ಅವರು ಹೇಳಿದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles