ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರಿಗೆ ನ್ಯುಮೋನಿಯಾ ಮತ್ತು ತೀವ್ರ ಜ್ವರ ಕಾಣಿಸಿಕೊಂಡಿದ್ದು, ನೂರುಲ್ ಇಸ್ಲಾಂ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಆಸ್ಪತ್ರೆಗೆ ದಾಖಲಾಗಿದ್ದಾರೆ.ಇನ್ನೂ ಅವರ ಆರೋಗ್ಯದ ಬಗ್ಗೆ ಆಸ್ಪತ್ರೆಯಿಂದ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.
79 ವರ್ಷದ ಉಮ್ಮನ್ ಚಾಂಡಿ ನ್ಯುಮೋನಿಯಾ ಮತ್ತು ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರೆ ಮಾಡಿ ನಮ್ಮ ತಂದೆಯ ಆರೋಗ್ಯ ವಿಚಾರಿಸಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದಗಳು ಎಂದು ಉಮ್ಮನ್ ಚಾಂಡಿ ಅವರ ಮಗ ಫೇಸ್‌ಬುಕ್ ಲೈವ್ ವಿಡಿಯೋ ಮಾಡಿದ್ದಾರೆ.
ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಉಮ್ಮನ್ ಚಾಂಡಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ ಇತ್ತೀಚೆಗಷ್ಟೇ ಸೋಲಾರ್ ಹಗರಣದ ಪ್ರಮುಖ ಆರೋಪಿ ಮಹಿಳೆಯೊಬ್ಬರು ಉಮ್ಮನ್ ಚಾಂಡಿ ವಿರುದ್ಧ ಮಾಡಿದ್ದ ಅತ್ಯಾಚಾರದ ಆರೋಪ ಪ್ರಕರಣದಲ್ಲಿ ಉಮ್ಮನ್ ಚಾಂಡಿಗೆ ಸಿಬಿಐ ಕ್ಲೀನ್ ಚಿಟ್ ನೀಡಿತ್ತು. ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಎಫ್ಐಆರ್ ದಾಖಲಿಸಿಕೊಳ್ಳಲಾಗಿತ್ತು.