ಬೆಂಗಳೂರು: ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾದ ಬಳಿಕ ಬಿಜೆಪಿ ನಾಯಕ ಆರ್.ಅಶೋಕ್ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ಭೇಟಿಯಾಗಿದ್ದಾರೆ. ಪದ್ಮನಾಭನಗರದಲ್ಲಿರುವ ಹೆಚ್‌ಡಿಡಿ ನಿವಾಸಕ್ಕೆ ಭೇಟಿ ನೀಡಿದ ಆರ್ ಅಶೋಕ್ ಕೆಲ ಹೊತ್ತು ಮಾತುಕತೆ ನಡೆಸಿದರು.
ಬಳಿಕ ಮಾಧ್ಯಮದವರೊಂದಿಗೆ ಆರ್ ಅಶೋಕ್, ಕಾವೇರಿ, ಮಹದಾಯಿ ನದಿ ವಿಚಾರವಾಗಿ ದೇವೇಗೌಡರು ಸಲಹೆ ನೀಡಿದ್ದಾರೆ. ಸಂಪೂರ್ಣ ಸಹಕಾರ ನೀಡುವುದಾಗಿ ದೇವೇಗೌಡರು ತಿಳಿಸಿದ್ದಾರೆ. ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದಕ್ಕೆ ನನಗೆ ಅಭಿನಂದನೆ ಸಲ್ಲಿಸಿದ್ದಾರೆ ಎಂದರು.
ಇದನ್ನೂ ಓದಿ: ಸ್ಪೀಕರ್ ಹುದ್ದೆ ಜಾತಿ, ಧರ್ಮ, ರಾಜಕೀಯ ಮೀರಿದ್ದು: ಖಾದರ್
ಕುಮಾರಸ್ವಾಮಿ ನೀವು ಒಟ್ಟಾಗಿ ಕೆಲಸ ಮಾಡಿ. ಯಾವುದೇ ಸಮಯದಲ್ಲಿ ಸಹಾಯ, ಆಶೀರ್ವಾದ ಇರುತ್ತದೆ. 60 ವರ್ಷದ ರಾಜಕೀಯ ಜೀವನದಲ್ಲಿ ಇಂತಹ ಕೆಟ್ಟ ಸರ್ಕಾರ ನೋಡಿಲ್ಲ. ಮೋದಿಯವರಿಗೆ ಗೌರವ ತರುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದರು.
ಲೋಕಸಭೆ ಚುನಾವಣೆಯಲ್ಲಿ ಒಟ್ಟಾಗಿ ಕೆಲಸ ಮಾಡೋಣ ಎಂದು ದೇವೇಗೌಡರು ಹೇಳಿದ್ದಾರೆ ಎಂದು ಆರ್ ಅಶೋಕ್ ತಿಳಿಸಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.