ಮೈಸೂರು: ನಾವು ಕೀಳು ಮಟ್ಟದ ರಾಜಕಾರಣ ಮಾಡಿಲ್ಲ. ಡರ್ಟಿ ಪಾಲಿಟಿಕ್ಸ್ ಮಾಡುವುದು ಸಂಘ ಪರಿವಾರದವರು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡರ್ಟಿ ಪಾಲಿಟಿಕ್ಸ್ ಮಾಡುವುದು ಸಂಘ ಪರಿವಾರದವರು. ಕಾಂಗ್ರೆಸ್‌ನವರು ಹೋರಾಟ ಮಾಡಿ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಆದರೆ ಅವರು ಮಹಾತ್ಮಗಾಂಧಿ ಕೊಂದವರನ್ನು ಇವರು ಆರಾಧಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: https://political360.in/congress-leaders-doing-dirty-politics-said-cm-basavaraj-bommai/
ಇನ್ನು ರಾಜ್ಯಕ್ಕೆ ರಾಹುಲ್ ಗಾಂಧಿ ಬಂದ್ರೆ ಬಿಜೆಪಿಗೆ ಲಾಭ ಸಿಎಂ ಬೊಮ್ಮಾಯಿ ಹೇಳಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಪಂಜಾಬ್, ತೆಲಂಗಾಣ, ಕೇರಳದಲ್ಲಿ ಮೋದಿ ಹೋಗಿದ್ದರು. ಅಲ್ಲಿ ಬಿಜೆಪಿ ಸೋತಿಲ್ವಾ? ಅವರು ಕೂಡ ಸೋಲ್ತಾರೆ. ಇದು ಕೇವಲ ರಾಜಕಾರಣಕ್ಕಾಗಿ ಹೇಳುತ್ತಿರುವುದಾಗಿದೆ. ಮೋದಿ ಹೋದ ಕಡೆಯಲ್ಲೂ ಬಿಜೆಪಿ ಸೋತಿದೆ. ಸಂಘ ಪರಿವಾರದವರು ಗಣೇಶನ ಮೆರವಣಿಗೆಯಲ್ಲಿ ಗೋಡ್ಸೆ ಫೋಟೋ ಇಟ್ಟುಕೊಂಡು ಓಡಾಡ್ತಾರೆ. ಇವರಿಗೆ ಯಾವ ನೈತಿಕತೆ ಇದೆ? ಪಾಪ ಇವರಿಗೆ ಡರ್ಟಿ ಪಾಲಿಟಿಕ್ಸ್ ಅಂದ್ರೆ ಗೊತ್ತಿಲ್ಲ. ಭ್ರಷ್ಟಾಚಾರ ಮಾಡ್ತಿದಿರಾ ಎಂಬುದು ಡರ್ಟಿ ಪಾಲಿಟಿಕ್ಸಾ? ಎಂದು ಸಿಎಂ ಬಸವರಾಜ ಬೊಮ್ಮಾಯಿಗೆ ತಿರುಗೇಟು ನೀಡಿದರು.