ಮೈಸೂರು: ಸಿಐಡಿ ಸ್ವತಂತ್ರ ಸಂಸ್ಥೆಯಲ್ಲ, ಇದು ರಾಜ್ಯ ಸರ್ಕಾರದ ಕೆಳಗಿರುವ ಒಂದು ಸಂಸ್ಥೆ. ಇವರು ಸರ್ಕಾರದ ಕೈಗೊಂಬೆಗಳಾಗಿ ಕೆಲಸ ಮಾಡುತ್ತಾರೆ. ಹಾಗಾಗಿ ಸ್ಯಾಂಟ್ರೋ ರವಿ ಪ್ರಕರಣ ಸರ್ಕಾರ ಸಿಐಡಿ ಮೂಲಕ ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.
ಮಾಧ್ಯಮಗಳ ಜೊತೆ ಮಾತನಾಡಿ, ಸ್ಯಾಂಟ್ರೋ ರವಿ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ವಹಿಸಿದ್ದು, ಈ ಪ್ರಕರಣ ಬಯಲಿಗೆ ಬಂದರೆ ಬಿಜೆಪಿಯವರ ನಿಜ ಬಣ್ಣ ಬಯಲಾಗುತ್ತದೆ ಎಂದು ದೂರಿದರು.ಕರ್ನಾಟಕದಲ್ಲಿ ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ನಾವು 130 ರಿಂದ 150 ಸ್ಥಾನ ಗೆಲ್ಲುತ್ತೇವೆ. ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಜನ ತೀರ್ಮಾನ ಮಾಡಿದ್ದಾರೆ. ಯಾರು ಏನೇ ಮಾಡಿದರೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಇನ್ನೂ ಕೋಲಾರದಲ್ಲಿ ಸ್ಫರ್ಧೇ ವಿಚಾರವಾಗಿ ಮಾತನಾಡಿ, ಕೋಲಾರ ವಿಧಾನಸಭಾ ಕ್ಷೇತ್ರದಿಂದ ಮಾತ್ರ ನನ್ನ ಸ್ಪರ್ಧೆ. ನನ್ನನ್ನು ಸೋಲಿಸಲು ಬಿಜೆಪಿ ಮತ್ತು ಜೆಡಿಎಸ್ ಎರಡು ಪಕ್ಷಗಳು ಪ್ರಯತ್ನ ಮಾಡಿದರೂ ಅಲ್ಲಿ ನಾನೇ ಗೆಲ್ಲೋದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೊಟ್ಟ ಭರವಸೆಯನ್ನು ಈಡೇರಿಸುತ್ತೇವೆ.. ನಾನು ಎಲ್ಲಾ ಜಿಲ್ಲೆಗಳಲ್ಲೂ ಪ್ರವಾಸ ಮಾಡಿದ್ದೇನೆ. ನೂರಕ್ಕೆ ನೂರು ನಾವೇ ಅಧಿಕಾರಕ್ಕೆ ಬರುತ್ತೇವೆ. ಅಧಿಕಾರಕ್ಕೆ ಬಂದ ನಂತರ, ನಾವು ಹೇಳಿದಂತೆ 200 ಯೂನಿಟ್ ವಿದ್ಯುತ್ ಹಾಗೂ ಮನೆಯ ಯಜಮಾನಿಗೆ ತಿಂಗಳಿಗೆ 2000 ರೂ., ಕೊಡುತ್ತೇವೆ ಎಂದು ಹೇಳಿದ್ದೇವೆ. ಎಷ್ಟು ಖರ್ಚಾದರು ಕೊಟ್ಟ ಭರವಸೆಯನ್ನು ಈಡೇರಿಸುತ್ತೇವೆ ಎಂದು ಭರವಸೆ ನೀಡಿದರು.