ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.24ರಿಂದ ನಾಲ್ಕು ದಿನಗಳ ಕಾಲ ಬೆಳಗಾವಿ ಪ್ರವಾಸ ಕೈಗೊಳ್ಳಲಿದ್ದಾರೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾಹಿತಿ ನೀಡಿದ್ದು, ಫೆ. 24ರಿಂದ ನಾಲ್ಕು ದಿನಗಳ ಕಾಲ ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಮತಕ್ಷೇತ್ರಗಳಲ್ಲಿ ಪ್ರವಾಸ ಹಮ್ಮಿಕೊಳ್ಳಲಿದ್ದಾರೆಂದು ಹೇಳಿದ್ದಾರೆ.
ಫೆ. 28 ರಂದು ಸಂಜೆ ಗೋಕಾಕನಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗುವುದು. 2023ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 1ನೇ ಹಂತದಲ್ಲಿ ಪ್ರಜಾಧ್ವನಿ ಯಾತ್ರೆ ಯಶಸ್ಸಿಯಾಗಿ ನಡೆಸಲಾಗಿದ್ದು, 2ನೇ ಹಂತದ ಯಾತ್ರೆಯನ್ನು ವಿಧಾನಸಭಾ ಕ್ಷೇತ್ರವಾರು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಪ್ರಜಾಧ್ವನಿ ಯಾತ್ರೆಯಲ್ಲಿ ಘೋಷಿಸಿದ ಯೋಜನೆಗಳನ್ನು ಮನೆ ಮನೆಗೆ ತಿಳಿಸಲಾಗುವುದು, ಇನ್ನು ಅನೇಕ ಯೋಜನೆಗಳನ್ನು ಘೋಷಿಸಲಾಗುವುದು, ಇದರಲ್ಲಿ ಜಿಲ್ಲಾವಾರು ಯೋಜನೆಗಳು ಹಂಚಿಕೆಯಾಗಿವೆ. ಜನ ಆಶೀರ್ವಾದ ಮಾಡಿದರೆ ಈ ಎಲ್ಲ ಕಾರ್ಯಕ್ರಮ ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದರು.
ಅಂದಹಾಗೆ ಬರುವ ವಿಧಾನಸಭಾ ಚುನಾವಣೆಯಲ್ಲಿ 140ಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸುವ ಮೂಲಕ ಸ್ಪಷ್ಟ ಬಹುಮತದ ನಿರೀಕ್ಷೆಯಲ್ಲಿರುವ ರಾಜ್ಯ ಕಾಂಗ್ರೆಸ್ ನಾಯಕರು ಪ್ರಜಾಧ್ವನಿ ಕಾರ್ಯಕ್ರಮ ಮೂಲಕ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ಪ್ರಜಾಧ್ವನಿ ಯಾತ್ರೆಯಲ್ಲಿ ಬಳಕೆ ಮಾಡಲಾಗುತ್ತಿರುವ ‘ಹಸ್ತ’ದ ಸಿಂಬಲ್ನಲ್ಲಿ ಬದಲಾವಣೆ ಮಾಡಲಾಗಿದೆ. ಈ ಬದಲಾವಣೆ ಜನರ ಗಮನ ಸೆಳೆಯುತ್ತಿದೆ.