ಕೊಪ್ಪಳ: ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ ಶ್ರಮಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು. ಜಿಲ್ಲೆಯಲ್ಲಿ ಬಿಜೆಪಿ ಕಚೇರಿ ಉದ್ಘಾಟಿಸಿ ಮಾತನಾಡಿ, ಕರ್ನಾಟಕ ದೇಶದಲ್ಲಿ ಯೋಜನೆ ಜಾರಿಗೊಳಿಸಿದ ಮೊದಲ ರಾಜ್ಯವಾಗಿದೆ, ಮಹಿಳೆಯರ ಕಲ್ಯಾಣಕ್ಕಾಗಿ ಹಲವು ಯೋಜನೆ ಜಾರಿಗೆ ತಂದಿದ್ದೇವೆ. ಆಯುಷ್ಮಾನ್ ಯೋಜನೆ ಮೂಲಕ ಬಡವರಿಗೆ ಅನುಕೂಲವಾಗಿದೆ ಎಂದರು.
ಕೊಪ್ಪಳ ಜಿಲ್ಲೆ ಸಾಂಸ್ಕೃತಿಕವಾಗಿ ಪವಿತ್ರ ಭೂಮಿ. ಯಡಿಯೂರಪ್ಪನವರಂತಹ ಕಾರ್ಯಕರ್ತರಿಂದ ಪಕ್ಷ ಬೆಳೆದಿದೆ. ಇಂದು 10 ಜಿಲ್ಲಾ ಕೇಂದ್ರಗಳಲ್ಲಿ ಕಚೇರಿ ಉದ್ಘಾಟಿಸಲಾಗಿದೆ. ಶ್ರೀನಗರದ ಲಾಲ್ಚೌಕ್ನಲ್ಲೂ ತ್ರಿವರ್ಣ ಧ್ವಜ ಹಾರಿಸಿದ್ದೇವೆ.
ಇದು ಬಿಜೆಪಿ ಕಾರ್ಯಕರ್ತರ ಶಕ್ತಿ. ಕೊರೊನಾ ಸೋಂಕಿನಿಂದ ಯುರೋಪ್ ಇನ್ನೂ ಮುಕ್ತವಾಗಿಲ್ಲ. ಆದರೆ ಭಾರತ ಕೊವಿಡ್ ವಿರುದ್ಧ ಹೋರಾಟ ಮಾಡಿ ಗೆದ್ದಿದೆ. ದೇಶದಲ್ಲಿ ಲಸಿಕೆ ನೀಡುವ ಕಾರ್ಯ ಮೋದಿ ಸರ್ಕಾರ ಮಾಡಿದೆ, ಭಾರತ್ ಜೋಡೋ ಅಲ್ಲ, ತೋಡೋ ಕೆಲಸ ಮಾಡುತ್ತಿದ್ದಾರೆ ಎಂದು ಜೆ.ಪಿ.ನಡ್ಡಾ ವಾಗ್ದಾಳಿ ಮಾಡಿದರು.
ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ರೈತ ಪರ ಹೋರಾಟಗಾರ, ಅಭಿವೃದ್ಧಿ ಹರಿಕಾರ ಯಡಿಯೂರಪ್ಪ ಎಂದು ಹೇಳಿದರು. ಹಳ್ಳಿಹಳ್ಳಿಯಲ್ಲೂ ಜನ ಬಿಜೆಪಿ ಪರ ನಿಲ್ಲಲು ಬಿಎಸ್ವೈ ಕಾರಣ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಅಲೆ ಇದೆ. 35 ವರ್ಷಗಳಲ್ಲಿ ಬಿಜೆಪಿ ಹಂತಹಂತವಾಗಿ ಬೆಳೆದು ನಿಂತಿದೆ. ಅದಕ್ಕೆ ಯಡಿಯೂರಪ್ಪನವರ ಪರಿಶ್ರಮವನ್ನು ಮರೆಯುವಂತಿಲ್ಲ ಎಂದು ಹೇಳಿದರು.