Sunday, March 26, 2023
spot_img
- Advertisement -spot_img

ಪದ್ಮ ವಿಭೂಷಣ ಪ್ರಶಸ್ತಿ ಬಂದಿರುವುದು ಬಯಸದೇ ಬಂದ ಭಾಗ್ಯ : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ


ಬೆಂಗಳೂರು: ಇತ್ತೀಚೆಗಷ್ಟೆ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದೇನೆ. ಅದರ ಸಮೀಪದಲ್ಲೇ ನನಗೆ ಪದ್ಮ ವಿಭೂಷಣ ಪ್ರಶಸ್ತಿ ಬಂದಿರುವುದು ಬಯಸದೇ ಬಂದ ಭಾಗ್ಯ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಸಂತಸ ವ್ಯಕ್ತಪಡಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಶಸ್ತಿ ಬಂದಿರೋದು ನನಗೆ ಬಹಳ ಸಂತೋಷ ಉಂಟುಮಾಡಿದೆ. 6 ದಶಕಗಳಿಂದ ರಾಜಕೀಯವಾಗಿ ಸಾಕಿ, ಸಲಹಿ, ಆಶೀರ್ವಾದ ಮಾಡಿದ ಕನ್ನಡದ 7 ಕೋಟಿ ಜನರಿಗೆ ನಮ್ರತೆಯಿಂದ ಸಮರ್ಪಣೆ ಮಾಡುತ್ತೇನೆ ಎಂದು ತಿಳಿಸಿದರು .

ನಾನು ರಾಜಕೀಯ ನಿವೃತ್ತಿ ಜೀವನ ಆರಂಭ ಮಾಡುತ್ತಿರುವ ಘಟ್ಟದಲ್ಲಿ ನನಗೆ ಈ ಪ್ರಶಸ್ತಿ ಬಂದಿರುವುದು ಬಯಸದೇ ಬಂದ ಭಾಗ್ಯವಾಗಿದೆ. ಈ ಪ್ರಶಸ್ತಿಯನ್ನು ಕಳೆದ 6 ದಶಕದಲ್ಲಿ ನನಗೆ ಬೆಂಬಲಿಸಿದ 7 ಕೋಟಿ ಕನ್ನಡಿಗರಿಗೆ ನಮ್ರತೆಯಿಂದ ಅರ್ಪಿಸುತ್ತೇನೆ ಎಂದು ಹೇಳಿದರು.

ಪ್ರಧಾನಿಯವರಿಗೆ ಹಾಗೂ ಗೃಹ ಸಚಿವರಿಗೆ ಋಣಿಯಾಗಿದ್ದೇನೆ ಮತ್ತೆ ನನ್ನ ಅನಂತ ನಮಸ್ಕಾರಗಳನ್ನು ಸಲ್ಲಿಸುತ್ತೇನೆ. ಇದು ನನಗೆ ಬಹಳ ಸಂತೋಷವಾಗಿದೆ. ನನ್ನ ರಾಜಕೀಯ ನಿವೃತ್ತಿಯೊಂದಿಗೆ ನನ್ನ ಆಸೆ ಆಕಾಂಕ್ಷೆಗಳು ನಿವೃತ್ತವಾಗಿವೆ. ಪ್ರಶಸ್ತಿಯ ಆಯ್ಕೆಯ ಮಾನದಂಡ ಆಯಾ ಕಾಲಘಟ್ಟದಲ್ಲಿ ಕಾಲಘಟ್ಟಕ್ಕೆ ತಕ್ಕಂತೆ ಬದಲಾಗಿದೆ ಎಂದು ಅಭಿಪ್ರಾಯಪಟ್ಟರು.

Related Articles

- Advertisement -

Latest Articles