ನವದೆಹಲಿ: ಸೆಪ್ಟೆಂಬರ್ 18 ರಿಂದ 22 ರವರೆಗೆ ಐದು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನದ ಬಗ್ಗೆ ತೀವ್ರ ರಾಜಕೀಯ ಊಹಾಪೋಹಗಳ ನಡುವೆ, ಈಗ ಅಧಿವೇಶನವು ಹಳೆಯ ಕಟ್ಟಡದಲ್ಲಿ ಪ್ರಾರಂಭವಾಗಲಿದೆ. ಆದ್ರೆ, ಸೆಪ್ಟೆಂಬರ್ 19 ರಂದು ಗಣೇಶ ಚತುರ್ಥಿ ಇದೆ ಅಂದೇ ಹೊಸ ಸಂಸತ್ತಿನ ಕಟ್ಟಡಕ್ಕೆ ಸ್ಥಳಾಂತರಗೊಳಿಸಲಾಗುತ್ತಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
5 ದಿನಗಳ ಅಧಿವೇಶನಕ್ಕೆ ಸರ್ಕಾರ ಯಾವುದೇ ಕಾರ್ಯಸೂಚಿಯನ್ನು ನೀಡದ ಕಾರಣ ಸಂಸತ್ತಿನ ವಿಶೇಷ ಅಧಿವೇಶನವು ಭಾರಿ ಸುದ್ದಿಯಲ್ಲಿದೆ. ಯಾವುದೇ ಕಾರ್ಯಸೂಚಿಯನ್ನು ಹಂಚಿಕೊಳ್ಳದ ಕಾರಣ ವಿಶೇಷ ಅಧಿವೇಶನ ಕರೆಯುವುದರ ಹಿಂದೆ ಯಾವುದೇ ಪಾರದರ್ಶಕತೆ ಇಲ್ಲ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಇದನ್ನೂ ಓದಿ : ‘ಭಾರತ್ ಅಥವಾ ಇಂಡಿಯಾ’: 2016 ರಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಹೇಳಿದ್ದೇನು?
ಮೋದಿ ಸರ್ಕಾರದ ಪ್ರತಿಷ್ಠಿತ ಯೋಜನೆಯಾದ ಹೊಸ ಸಂಸತ್ ಕಟ್ಟಡವನ್ನು ಈ ವರ್ಷ ಮೇ 28 ರಂದು ಪ್ರಧಾನಿ ಮೋದಿ ಉದ್ಘಾಟಿಸಿದರು. ಒಟ್ಟು ₹971 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ಸಂಸತ್ ಭವನದಲ್ಲಿ ಲೋಕಸಭೆಯಲ್ಲಿ 888 ಸದಸ್ಯರು ಮತ್ತು ರಾಜ್ಯಸಭೆಯಲ್ಲಿ 300 ಸದಸ್ಯರು ಕೂರಲು ಅವಕಾಶ ಕಲ್ಪಿಸಲಾಗಿದೆ. ಸಂಸತ್ತಿನ ಮುಂಗಾರು ಅಧಿವೇಶನವು ಹಳೆಯ ಕಟ್ಟಡದಲ್ಲಿ ನಡೆಯಿತು, ವಿಶೇಷ ಅಧಿವೇಶನವು ಹೊಸ ಸಂಸತ್ತಿನ ಕಟ್ಟಡದಲ್ಲಿ ನಡೆಯುವ ಮೊದಲ ಅಧಿವೇಶನವಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.