Monday, March 27, 2023
spot_img
- Advertisement -spot_img

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಇನ್ನಿಲ್ಲ

ಇಸ್ಲಾಮಾಬಾದ್‌: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ದುಬೈನ ಆಸ್ಪತ್ರೆಯಲ್ಲಿ ನಿಧನರಾದರು. 79 ವರ್ಷದ ಪಾಕಿಸ್ತಾನದ ಮಾಜಿ ಅಧ್ಯಕ್ಷ ಮುಷರಫ್‌ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ದುಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮುಷರಫ್ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಒಂದೆರಡು ವಾರಗಳಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ಇತ್ತೀಚೆಗಷ್ಟೇ ಅವರನ್ನು ಪಾಕಿಸ್ತಾನದ ರಾವಲ್ಪಿಂಡಿ ನಗರದಲ್ಲಿರುವ ಆರ್ಮ್ಡ್ ಫೋರ್ಸಸ್ ಇನ್ಸ್​ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಆಸ್ಪತ್ರೆಗೆ ವರ್ಗವಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.

ಪರ್ವೇಜ್ ಮುಷರಫ್ ಅವರು 1999 ರಿಂದ 2008ರ ವರೆಗೆ ಪಾಕಿಸ್ತಾನದ ಅಧ್ಯಕ್ಷರಾಗಿದ್ದರು. ಸೇನಾ ಮುಖ್ಯಸ್ಥರಾಗಿದ್ದ ಅವರು 1999ರಲ್ಲಿ ಸೇನಾ ಬಲ ಬಳಸಿಕೊಂಡು ಆಗಿನ ಪ್ರಧಾನಿ ನವಾಜ್ ಷರೀಫ್ ಅವರ ವಿರುದ್ಧ ರಕ್ತಪಾತರಹಿತ ದಂಗೆ ನಡೆಸಿ, ಅಧಿಕಾರವನ್ನು ಕಿತ್ತುಕೊಂಡಿದ್ದರು.

ಬಳಿಕ 2001ರಿಂದ 2008ರ ಅವಧಿಯಲ್ಲಿ ಪಾಕಿಸ್ತಾನದ ಅಧ್ಯಕ್ಷರಾಗಿ ಆಡಳಿತ ನಡೆಸಿದ್ದರು. ಭಾರತದ ವಿರುದ್ಧ ಕಾರ್ಗಿಲ್ ಯುದ್ಧವನ್ನು ಆರಂಭಿಸಿ ಮುಖಭಂಗ ಅನುಭವಿಸಿದ್ದರು.

ಪರ್ವೇಜ್ ಮುಷರಫ್ ಬದುಕುಳಿಯುವುದು ಬಹುತೇಕ ಕಷ್ಟ ಎಂದು ಸಾಕಷ್ಟು ಮೊದಲೇ ಗೊತ್ತಾಗಿತ್ತು. ಮುಷರಫ್ ಅವರ ಆರೋಗ್ಯ ಚೇತರಿಕೆ ಕಾಣುವುದು ಸಾಧ್ಯವಾಗುತ್ತಿಲ್ಲ. ಅವರ ಅಂಗಾಗಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಅವರ ಕುಟುಂಬ ಸದಸ್ಯರು ಜೂನ್ 10ರಂದು ಹೇಳಿಕೆ ನೀಡಿದ್ದರು.

Related Articles

- Advertisement -

Latest Articles