ಮಂಡ್ಯ: ಯಾಕೆ ಬ್ರಾಹ್ಮಣ ಸಮುದಾಯದವರು ಸಿಎಂ ಆಗಬಾರದಾ? ಬ್ರಾಹ್ಮಣರು ಭಾರತದ ಪ್ರಜೆಗಳು ಅಲ್ಲವೇ? ಎಂದು ಪೇಜಾವರಶ್ರೀ ಪ್ರಶ್ನಿಸಿದರು.
ಮಾಜಿ ಸಿಎಂ ಹೆಚ್ ಡಿಕೆ ಹೇಳಿಕೆಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯದ ಎಷ್ಟು ಶಾಸಕರು ಇದ್ದಾರೆ? ಸಮುದಾಯದ ಎಷ್ಟು ಜನರಿಗೆ ಟಿಕೆಟ್ ನೀಡಿದ್ದಾರೆ ಎಂದು ಸಾಲು ಸಾಲು ಪ್ರಶ್ನೆಗಳನ್ನಿಟ್ಟರು. ಮಾತನಾಡುವವರು ಏನು ಬೇಕಾದರೂ ಮಾತನಾಡುತ್ತಾರೆ. ಹಿನ್ನೆಲೆ ಅಥವಾ ಪುರಾವೆ ಇಟ್ಟುಕೊಂಡು ಮಾತನಾಡಬೇಕು ಎಂದು ಕಿಡಿಕಾರಿದರು.
ಹಿಂದಿನಿಂದಲೂ ಬ್ರಾಹ್ಮಣರ ವಿರುದ್ಧವಾಗಿ ಹೇಳಿಕೆಗಳು ನೀಡಲಾಗ್ತಿದೆ. ಪ್ರತಿ ಚುನಾವಣೆ ಸಂದರ್ಭದಲ್ಲೂ ಬ್ರಾಹ್ಮಣರ ಬಗ್ಗೆ ಹೇಳಿಕೆ ನೀಡ್ತಾರೆ. ಬ್ರಾಹ್ಮಣರ ಸಮುದಾಯ ದಲ್ಲಿ ಯಾರೂ ಧ್ವನಿ ಎತ್ತಿ ಮಾತಾಡಲ್ಲ. ಬ್ರಾಹ್ಮಣರು ಅಲ್ಪಸಂಖ್ಯಾತರು, ಏನು ಮಾತಾಡಿದ್ರೂ ನಡೆಯುತ್ತೆ ಅಂತ ಭಾವನೆ. ಒಂದು ವೇಳೆ ಬ್ರಾಹ್ಮಣರು ಸಿಎಂ ಆಗುವುದಾದರೆ ಆಗಲಿ ಎಂದು ಹೇಳಿದರು.
ಪ್ರಜಾಪ್ರಭುತ್ವ ಸಮಾಜದಲ್ಲಿ ಯಾರಿಗೂ ಅನ್ಯಾಯವಾಗಬಾರದು. ಇಪ್ರಜಾಪ್ರಭುತ್ವ ಸಮಾಜದಲ್ಲಿ ಈ ರೀತಿ ಒಂದು ಧರ್ಮವನ್ನ ದೂಷಿಸುವುದು ಸರಿಯಲ್ಲ. ಯಾವ ಧರ್ಮದವ್ರಿಗೂ ಅನ್ಯಾಯ ಆಗಬಾರದು ಎಂದು ಹೇಳಿದರು.