ತುಮಕೂರು : ಜನರು ನಮ್ಮ ಮೇಲೆ ವಿಶ್ವಾಸವಿಟ್ಟು ಅಧಿಕಾರ ಕೊಟ್ಟಿದ್ದಾರೆ. ನಾಳೆ ಮೈಸೂರಿನಲ್ಲಿ ನಮ್ಮ ಗೃಹಲಕ್ಷ್ಮಿ ಕಾರ್ಯಕ್ರಮ ಉದ್ಘಾಟನೆ ಆಗಲಿದೆ. ಮನೆಯೊಡತಿಗೆ ಪ್ರತಿ ತಿಂಗಳು ಎರಡು ಸಾವಿರ ನೀಡಲಿದ್ದೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದರು.
ನಗರದಲ್ಲಿಂದು ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಲಾಗಿದೆ. ಇದರಲ್ಲಿ ಮಹಿಳೆಯರಿಗೆ ಗೃಹಲಕ್ಷೀ ಯೋಜನೆ ಜಾರಿಗೊಳಿಸಲಾಗುತ್ತಿದೆ. ಈ ಬಗ್ಗೆ ಅನೇಕ ಟೀಕೆ ಟಿಪ್ಪಣಿಗಳನ್ನು ವಿರೋಧ ಪಕ್ಷಗಳು ಮಾಡಿದ್ದವು. ನಾವು ಕೊಡುವುದಿಲ್ಲ, ಸುಮ್ಮನೆ ಹೇಳುತ್ತಿದ್ದೇವೆಂದು ಜನರನ್ನು ತಪ್ಪು ದಾರಿಗೆಳೆಯುವ ಹೇಳಿಕೆಗಳನ್ನು ಗಮನಿಸಿದ್ದೇವೆ ಎಂದರು.
ಇದನ್ನೂ ಓದಿ : ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡಲು ಕಾಲಮಿತಿ ರೂಪಿಸಿ; ಸುಪ್ರೀಂ ಸೂಚನೆ
ಬಿಜೆಪಿಯವರು ಅಧಿಕಾರದಲ್ಲಿ ಇದ್ದದ್ದನ್ನು ಇನ್ನೂ ಅವರು ಮರೆತಿಲ್ಲ. 40% ಕಮಿಷನ್ ಜೊತೆಗೆ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ಎಂಬುವುದರಿಂದ ಅವರು ಇನ್ನೂ ಹೊರಗೆ ಬಂದಿಲ್ಲ, ಅವರಿನ್ನೂ ಅದೇ ಮನಸ್ಥಿತಿಯಲ್ಲಿದ್ದಾರೆ ಎಂದು ಟೀಕಿಸಿದರು.
ಕರ್ನಾಟಕದ ಜನರಿಗೆ ಒಳ್ಳೆಯ ಆಡಳಿತ ನೀಡುತ್ತೇವೆ ಎಂದು ಹೇಳಿದ್ದೇವೆ, ಜನಪ್ರಿಯ ಯೋಜನೆ ಜಾರಿಗೆ ತಂದಿರುವ ಕಾರಣ ಅಭಿವೃದ್ಧಿ ಸ್ವಲ್ಪ ಹಿನ್ನಡೆಯಾಗಿರಬಹುದು. ಮುಂದಿನ ದಿನಗಳಲ್ಲಿಅಭಿವೃದ್ದಿಗೆ ವೇಗ ಸಿಗಲಿದೆ. 36 ಸಾವಿರ ಕೋಟಿ ಖರ್ಚು ಮಾಡಲು ಶುರುಮಾಡಿದ್ದೇವೆ. ಬೊಮ್ಮಾಯಿ ಭ್ರಷ್ಟಾಚಾರ. ಭ್ರಷ್ಟಾಚಾರ ಎನ್ನುವುದನ್ನು ಬಹಳ ಬೇಗ ಮರೆತರೆ ಒಳ್ಳೆಯದು ಎಂದು ಸಲಹೆ ನೀಡಿದರು.
ಆಪರೇಷನ್ ಹಸ್ತದ ವಿಚಾರಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವರು, ನಮ್ಮ ಜಿಲ್ಲೆಯಲ್ಲೂ ಪಕ್ಷಕ್ಕೆ ಬರುವವರಿದ್ದಾರೆ. ಮುಂದಿನ ದಿನಗಳಲ್ಲಿ ತಿಳಿಯಲಿದೆ. ಬಿಜೆಪಿ ಹಾಗೂ ದಳದಿಂದ ಬರುತ್ತಾರೆ ಎಂದು ಆಪರೇಷನ್ ಹಸ್ತದ ಸುಳಿವು ನೀಡಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.