ಬೆಂಗಳೂರು : ಪ್ಲಾಸ್ಟರ್ ಆಫ್ ಪ್ಯಾರೀಸ್(ಪಿಒಪಿ) ಗಣೇಶ ಮೂರ್ತಿ ತಯಾರಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ತಿಳಿದಿ ಬಂದಿದೆ.
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಮಂಗಳವಾರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಸಚಿವ ಖಂಡ್ರೆ, ಪರಿಸರಕ್ಕೆ ಮಾರಕವಾಗಿರುವ ಪಿಒಪಿ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಮತ್ತು ವಿಸರ್ಜನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು. ಪಿಒಪಿ ಮೂರ್ತಿಗಳ ತಯಾರಿಕೆ ಕಂಡು ಬಂದರೆ ತಯಾರಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಅಧಿಕಾರಿಗಳಿಗೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಎಲ್ಲದಕ್ಕೂ ರಾಜೀನಾಮೆಯೇ ಪರಿಹಾರವಲ್ಲ : ಸತೀಶ್ ಜಾರಕಿಹೊಳಿ
ನೀರು ಹಾನಿಯನ್ನುಂಟು ಮಾಡುವ ಭಾರ ಲೋಹ ಮತ್ತು ರಾಸಾಯನಿಕ ಬಣ್ಣ ಲೇಪಿತ ಪಿಒಪಿ ಮೂರ್ತಿ ತಯಾರಿಕೆ, ದಾಸ್ತಾನು, ಮಾರಾಟ ಮತ್ತು ವಿಸರ್ಜನೆ ತಡೆಯಲು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ 2020 ಮೇ 12ರಂದು ಮಾರ್ಗಸೂಚಿ ಹೊರಡಿಸಿದೆ. ಅದರನ್ವಯ ಪಿಒಪಿ ಮೂರ್ತಿ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ. ಅದರ ಕಟ್ಟುನಿಟ್ಟಿನ ಪಾಲನೆ ಮಾಡಬೇಕಿದೆ ಎಂದು ಹೇಳಿದರು.
ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯಾದ್ಯಂತ ಪಿಒಪಿ ಗಣೇಶ ಮಾರಾಟ ನಿರ್ಬಂಧಿಸುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೂ ಸಚಿವರು ಆದೇಶಿಸಿದರು.
ರಾಜ್ಯದ ಜನರಲ್ಲಿ ಸಚಿವರ ಮನವಿ
ಈ ಬಗ್ಗೆ ಟ್ವೀಟ್ ಮೂಲಕ ಜನರಲ್ಲಿ ಮನವಿ ಮಾಡಿರುವ ಸಚಿವ ಈಶ್ವರ ಖಂಡ್ರೆ, ಈ ಬಾರಿ ಸೆಪ್ಟೆಂಬರ್ 18 ರಂದು ಸಂಭ್ರಮ ಸಡಗರದಿಂದ ಗಣೇಶ ಚತುರ್ಥಿ ಆಚರಿಸಲಾಗುತ್ತದೆ. ನಮ್ಮ ಭಕ್ತಿ, ಭಾವ, ಸಂಪ್ರದಾಯಕ್ಕೆ ಚ್ಯುತಿ ಆಗದಂತೆ ಪರಿಸರ ಸ್ನೇಹಿ ಮಣ್ಣಿನ ಗೌರಿ, ಗಣಪತಿ ತಂದು ಪೂಜಿಸಿ ಹಬ್ಬ ಆಚರಿಸೋಣ. ಆದರೆ, ನಮ್ಮ ಆಚರಣೆಯಿಂದ ಜಲ, ನೆಲ, ಗಾಳಿ ಮತ್ತು ಪರಿಸರಕ್ಕೆ ಹಾನಿ ಆಗದಂತೆ ಎಚ್ಚರಿಕೆ ವಹಿಸೋಣ.
ಇದನ್ನೂ ಓದಿ : ಬರ ತಾಲೂಕುಗಳ ಘೋಷಣೆ : ಇಂದು ಸಂಪುಟ ಉಪ ಸಮಿತಿ ಸಭೆ
ಕಲುಷಿತ ನೀರು ಸೇವನೆಯಿಂದ ರಾಜ್ಯದ ವಿವಿಧೆಡೆಗಳಲ್ಲಿ ಜೀವಹಾನಿಯೂ ಆಗಿದ್ದು, ಅಮೂಲ್ಯವಾದ ಜನ, ಜಾನುವಾರುಗಳ ಜೀವ ಉಳಿಸಲು ಮತ್ತು ಆರೋಗ್ಯ ರಕ್ಷಿಸಲು ಪಿಒಪಿ ಗಣೇಶ ಮೂರ್ತಿಗಳನ್ನು ಬಳಸದಂತೆ ಪರಿಸರ ಸಚಿವನಾಗಿ ರಾಜ್ಯದ ಜನರಲ್ಲಿ ಮನವಿ ಮಾಡುತ್ತೇನೆ ಈ ಎಂದು ಬರೆದುಕೊಂಡಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.