ನವದೆಹಲಿ: ಪ್ರಧಾನಿ ಮೋದಿ ಒಬ್ಬ ವ್ಯಕ್ತಿ, ಒಂದು ಸರ್ಕಾರ, ಒಂದು ಉದ್ಯಮ ಸಮೂಹದ ಮೇಲೆ ನಂಬಿಕೆ ಇಟ್ಟಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟೀಕಿಸಿದ್ದಾರೆ. ‘ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ’ ಜಿ20 ಥೀಮ್. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು “ಒಬ್ಬ ವ್ಯಕ್ತಿ, ಒಂದು ಸರ್ಕಾರ, ಒಂದು ಉದ್ಯಮ ಸಮೂಹದಲ್ಲಿ ನಂಬಿಕೆ ಇಟ್ಟಿದ್ದಾರೆ ಎಂದಿದ್ದಾರೆ.
ಈ ಕುರಿತು ಟ್ವಿಟರ್‌ನಲ್ಲಿ (ಎಕ್ಸ್) ಸುದೀರ್ಘ ಪತ್ರ ಬರೆದಿರುವ ಅವರು, ‘ಜಿ20 ಶೃಂಗಸಭೆ ದೆಹಲಿಯಲ್ಲಿ ಆರಂಭವಾಗುತ್ತಿದ್ದಂತೆ, ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಕಡಿವಾಣ ಹಾಕಲು ಹಿಂದಿನ ಅಂತಾರಾಷ್ಟ್ರೀಯ ಸಮುದಾಯದ ಸಭೆಗಳಲ್ಲಿ ಮೋದಿ ನೀಡಿದ ಹಲವು ಉಪದೇಶಗಳನ್ನು ನೆನಪಿಸಿಕೊಳ್ಳುವುದು ಯೋಗ್ಯವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕೊಳಗೇರಿಯನ್ನು ಧ್ವಂಸಗೊಳಿಸಿ ಅಥವಾ ಅವುಗಳ ಮರೆಮಾಚಿ ಗಣ್ಯರಿಗೆ ತೋರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿಗೆ ಧಕ್ಕೆ ಭಾರದಂತೆ ವಿಶ್ವ ನಾಯಕರನ್ನು ಒಟ್ಟುಗೂಡಿಸಲಾಗಿದೆ ಎಂದಿದ್ದಾರೆ.
ಇದನ್ನೂ ಓದಿ: G20 ಶೃಂಗಸಭೆ ವೇದಿಕೆಯಲ್ಲೂ ರಾರಾಜಿಸಿದ ‘ಭಾರತ್’
ಯುಎಸ್ ಸಂಶೋಧನಾ ಸಂಸ್ಥೆ ಹಿಂಡೆನ್‌ಬರ್ಗ್ ಅದಾನಿ ಸಮೂಹ ಸಂಸ್ಥೆಗಳಲ್ಲಿ ‘ಅಕ್ರಮ’ ನಡೆದಿದೆ ಎಂದು ಆರೋಪಿಸಿದ ನಂತರ ಮತ್ತು ಷೇರು ಬೆಲೆ ಅಕ್ರಮ ಆರೋಪದ ನಂತರ ಕಾಂಗ್ರೆಸ್ ಗೌತಮ್ ಅದಾನಿ ಹಾಗೂ ಮೋದಿ ಕುರಿತಂತೆ ಟೀಕೆಗಿಳಿದಿದೆ. ಈ ವ್ಯವಹಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪತ್ತೆಗೆ ತನಿಖೆಗೆ ಆದೇಶಿಸುವಂತೆ ಕೇಂದ್ರಕ್ಕೆ ಮನವಿ ಮಾಡುತ್ತಿದೆ. ಆದರೆ ಅದಾನಿ ಗ್ರೂಪ್ ಹಿಂಡೆನ್‌ಬರ್ಗ್ ವರದಿಯಲ್ಲಿ ಮಾಡಲಾದ ಎಲ್ಲಾ ಆರೋಪಗಳನ್ನು ನಿರಾಕರಿಸಿದೆ ಮತ್ತು ತನ್ನ ಕಡೆಯಿಂದ ಯಾವುದೇ ತಪ್ಪು ನಡೆದಿಲ್ಲ ಎಂದು ಹೇಳಿಕೊಂಡಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.