ನವದೆಹಲಿ : 25ನೇ ಬ್ರಿಕ್ಸ್ ಶೃಂಗಸಭೆಯ ಸಲುವಾಗಿ ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.
ಚೀನಾ ಅಧ್ಯಕ್ಷರ ಭೇಟಿಯ ವೇಳೆ ಪ್ರಧಾನಿ ಮೋದಿ ಲಡಾಖ್ ನ ವಾಸ್ತವಿಕ ನಿಯಂತ್ರಣ ರೇಖೆ (ಎಲ್ಎಸಿ) ಯ ತಕರಾರಿನ ಕುರಿತು ಪ್ರಸ್ತಾಪಿಸಿದ್ದಾರೆ ಎಂದು ಭಾರತ ಸರ್ಕಾರದ ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಗುರುವಾರ ತಿಳಿಸಿದ್ದಾರೆ.
ಉಭಯ ನಾಯಕರ ಭೇಟಿಯ ವೇಳೆ ಗಡಿ ನಿಯಂತ್ರಣ ರೇಖೆಯಲ್ಲಿ ಶಾಂತಿ ಕಾಪಾಡುವ ಮೂಲಕ ಎರಡೂ ದೇಶಗಳು ಪರಸ್ಪರ ಗೌರವ ಕಾಪಾಡಿಕೊಳ್ಳುವ ಬಗ್ಗೆ ಪ್ರಧಾನಿ ಮೋದಿ ಒತ್ತಿ ಹೇಳಿದ್ದಾರೆ. ಗಡಿಯಲ್ಲಿ ಉದ್ವಿಗ್ನತೆಯನ್ನ ಶಮನ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ಉಭಯ ನಾಯಕರು ಒಪ್ಪಿಕೊಂಡಿದ್ದಾರೆ ಎಂದು ವಿನಯ್ ಕ್ವಾತ್ರಾ ಹೇಳಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.