ಬೆಂಗಳೂರು: ಚಂದ್ರಯಾನ-3 ಯೋಜನೆ ಯಶಸ್ವಿಯಾಗಿರುವ ಬೆನ್ನಲ್ಲೇ ಇಸ್ರೋ ವಿಜ್ಞಾನಿಗಳನ್ನು ಖುದ್ದು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಇಸ್ರೋ ಕೇಂದ್ರಕ್ಕೆ ಆಗಮಿಸಿದ್ದಾರೆ. ಪೀಣ್ಯದಲ್ಲಿರುವ ಇಸ್ರೋ ಕಚೇರಿಗೆ ಆಗಮಿಸಿದ್ದಾರೆ.
ಪ್ರಧಾನಿ ಮೋದಿಯವರನ್ನು ಇಸ್ರೋ ವಿಜ್ಞಾನಿಗಳ ಅತೀ ಉತ್ಸಾಹದಿಂದ ಸ್ವಾಗತಿಸಿದ್ದಾರೆ. ಇಸ್ರೋ ಅಧ್ಯಕ್ಷ ಸೋಮನಾಥನ್ ಪ್ರಧಾನಿ ಮೋದಿ ಅವರನ್ನು ಕೇಂದ್ರಕ್ಕೆ ಬರಮಾಡಿಕೊಂಡಿದ್ದಾರೆ. ಇಸ್ರೋ ವಿಜ್ಞಾನಿಗಳನ್ನು ಖುದ್ದು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಕಚೇರಿಗೆ ಆಗಮಿಸಿದ್ದು, ಈ ವೇಳೆ ಚಂದ್ರಯಾನ್ ಯೋಜನೆ ತಂಡವನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ. ಬಳಿಕ ವಿಜ್ಞಾನಿಗಳ ಸಾಧನೆ ಕುರಿತು ಭಾಷಣ ಮಾಡಲಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.