ಜೋಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿರುವ 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗಿಯಾಗಲು ವಿಶೇಷ ವಿಮಾನದಲ್ಲಿ ತಲುಪಿದ ಪ್ರಧಾನಿ ಮೋದಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ದಕ್ಷಿಣ ಆಫ್ರಿಕಾ ಅಧ್ಯಕ್ಷ ಮಟಮೇಲಾ ಸಿರಿಲ್ ರಾಮಫೋಸಾ ಆಹ್ವಾನದ ಮೇರೆಗೆ ಮೋದಿ ಅಲ್ಲಿಗೆ ತೆರಳಿದ್ದಾರೆ. ಇಂದಿನಿಂದ ಆ.24ರ ವರೆಗೆ ಬ್ರಿಕ್ಸ್ ಶೃಂಗಸಭೆ ನಡೆಯಲಿದ್ದು (BRICS ಬ್ರೆಜಿಲ್, ರಷ್ಯಾ, ಇಂಡಿಯಾ, ಚೀನಾ, ಸೌತ್ ಆಫ್ರಿಕಾ), ಈ ಪ್ರವಾಸವು ಭಾರತ ಮತ್ತು ದಕ್ಷಿಣ ಆಫ್ರಿಕಾ ರಾಷ್ಟ್ರಗಳ ನಡುವಣ ರಾಜತಾಂತ್ರಿಕ ಸಂಬಂಧಗಳ 30ನೇ ವಾರ್ಷಿಕೋತ್ಸವದ ಪ್ರತೀಕವಾಗಿದೆ ಎಂದು ಬಣ್ಣಿಸಲಾಗುತ್ತಿದೆ.
ಇದನ್ನೂ ಓದಿ: ಲಡಾಖ್ ಪ್ರವಾಸದಲ್ಲಿ ರಾಹುಲ್ ಗಾಂಧಿ ಏನೆಲ್ಲಾ ಮಾಡಿದ್ರು? ಚಿತ್ರಗಳೇ ಹೇಳ್ತಿವೆ ನೋಡಿ..
ಈ ಬಾರಿಯ ಶೃಂಗಸಭೆಯ ನೇತೃತ್ವವನ್ನು ದಕ್ಷಿಣ ಆಫ್ರಿಕಾ ವಹಿಸಿಕೊಂಡಿದೆ. ಆಫ್ರಿಕಾದ ಅಧ್ಯಕ್ಷರೇ ಬ್ರಿಕ್ಸ್ ಅಧ್ಯಕ್ಷರಾಗಿದ್ದಾರೆ.
‘BRICS ಮತ್ತು ಆಫ್ರಿಕಾ: ಪರಸ್ಪರ ವೇಗವರ್ಧಿತ ಬೆಳವಣಿಗೆ ಹಾಗೂ ಸುಸ್ಥಿರ ಅಭಿವೃದ್ಧಿ ಮತ್ತು ಅಂತರ್ಗತ ಬಹುಪಕ್ಷೀಯತೆಗಾಗಿ ಪಾಲುದಾರಿಕೆ’ ಎಂಬ ವಿಚಾರ ವೇದಿಕೆ ಅಡಿಈ ಬಾರಿಯ ಶೃಂಗಸಭೆ ಆಯೋಜಿಸಲಾಗಿದೆ.


ಈ ಶೃಂಗಸಭೆಯಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಸೇರಿ ಹಲವು ದೇಶದ ಗಣ್ಯರು ಭಾಗಿಯಾಗಲಿದ್ದಾರೆ. ಶೃಂಗಸಭೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಅಲ್ಲಿಂದ ಗ್ರೀಸ್‌ನತ್ತ ಪ್ರವಾಸ ಮುಂದುವರಿಸಲಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.