ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧದಲ್ಲಿ ನಾಗರಿಕರ ಸಾವನ್ನು ಭಾರತ ತೀವ್ರವಾಗಿ ಖಂಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆಯಲ್ಲಿ ಭಾಗಿಯಾಗಿರುವ ಅವರು, ಭಾಷಣ ವೇಳೆ ಹಮಾಸ್ ಹಾಗೂ ಇಸ್ರೇಲ್ ನಡುವಿನ ಯುದ್ಧದ ಕುರಿತು ಪ್ರಸ್ತಾಪಿಸಿದ್ದಾರೆ.
ಎರಡನೇ ವಾಯ್ಸ್ ಆಫ್ ಗ್ಲೋಬಲ್ ಸೌತ್ ಶೃಂಗಸಭೆಯ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಅವರು, ಇಸ್ರೇಲಿ ಪಡೆಗಳು ಮತ್ತು ಹಮಾಸ್ ನಡುವಿನ ಸಂಘರ್ಷದಲ್ಲಿ ನಾಗರಿಕರ ಸಾವನ್ನು ಭಾರತ ತೀವ್ರವಾಗಿ ಖಂಡಿಸುತ್ತದೆ. ಪಶ್ಚಿಮ ಏಷ್ಯಾದ ಪರಿಸ್ಥಿತಿಯಿಂದ ಹೊಸ ಸವಾಲುಗಳು ಹೊರಹೊಮ್ಮುತ್ತಿವೆ ಎಂದರು.
ಇದನ್ನೂ ಓದಿ: Telangana Election 2023: ಪ್ರಣಾಳಿಕೆ ಬಿಡುಗಡೆ ಮಾಡಿದ ಕಾಂಗ್ರೆಸ್!
‘ಪಶ್ಚಿಮ ಏಷ್ಯಾ ವಲಯದಲ್ಲಿನ ಘಟನೆಗಳಿಂದ ಹೊಸ ಸವಾಲುಗಳು ಹೊರಹೊಮ್ಮುತ್ತಿರುವುದನ್ನು ನಾವೆಲ್ಲರೂ ನೋಡುತ್ತಿದ್ದೇವೆ. ಅಕ್ಟೋಬರ್ 7 ರಂದು ಇಸ್ರೇಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸಿದೆ. ನಾವು ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಒತ್ತು ನೀಡಿದ್ದೇವೆ. ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಲ್ಲಿ ನಾಗರಿಕರ ಸಾವುಗಳನ್ನು ನಾವು ಬಲವಾಗಿ ಖಂಡಿಸುತ್ತೇವೆ’ ಎಂದು ಮೋದಿ ಶೃಂಗಸಭೆಯಲ್ಲಿ ಹೇಳಿದರು.
ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದ ಮೋದಿ, ಭಾರತವು ಪ್ಯಾಲೆಸ್ತೀನ್ ಜನರಿಗೆ ಮಾನವೀಯ ನೆರವನ್ನು ಕಳುಹಿಸಿದೆ. “ಗ್ಲೋಬಲ್ ಸೌತ್‌ನ ದೇಶಗಳು ಹೆಚ್ಚಿನ ಜಾಗತಿಕ ಒಳಿತಿಗಾಗಿ ಒಂದಾಗಬೇಕಾದ ಸಮಯ ಇದು” ಎಂದು ಸದಸ್ಯ ರಾಷ್ಟ್ರಗಳಿಗೆ ಕರೆ ನೀಡಿದರು.
ಇದನ್ನೂ ಓದಿ: ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ನೀಡಿದ್ದ ಡೆಡ್‌ಲೈನ್ ವಿಸ್ತರಣೆ!
ಹೊಸ ತಂತ್ರಜ್ಞಾನವು ಜಾಗತಿಕ ಉತ್ತರ ಮತ್ತು ಜಾಗತಿಕ ದಕ್ಷಿಣದ ನಡುವಿನ ಅಂತರವನ್ನು ಹೆಚ್ಚಿಸಬಾರದು.ಕೃತಕ ಬುದ್ಧಿಮತ್ತೆಯ ಸಮಯದಲ್ಲಿ, ತಂತ್ರಜ್ಞಾನವನ್ನು ಜವಾಬ್ದಾರಿಯುತವಾಗಿ ಬಳಸುವುದು ಮುಖ್ಯವಾಗಿದೆ. ಇದನ್ನು ಇನ್ನಷ್ಟು ಉತ್ತೇಜಿಸಲು, ಮುಂದಿನ ತಿಂಗಳು, ಭಾರತವು ಆರ್ಟಿಫಿಷಿಯಾಐ ಜಾಗತಿಕ ಪಾಲುದಾರಿಕೆ ಶೃಂಗಸಭೆಯನ್ನು ಆಯೋಜಿಸಲಿದೆ ಎಂದರು
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.