Monday, December 11, 2023
spot_img
- Advertisement -spot_img

ಟಾಪ್ ಬ್ಯಾಂಕರ್ ಆಗಿ ಸ್ಥಾನ ಪಡೆದ ಆರ್‌ಬಿಐ ಅಧ್ಯಕ್ಷ : ಅಭಿನಂದಿಸಿದ ಪಿಎಂ ಮೋದಿ

ದೆಹಲಿ : 2023 ವರ್ಷದ ಗ್ಲೋಬಲ್ ಫೈನಾನ್ಸ್ ಸೆಂಟ್ರಲ್ ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್ ನಲ್ಲಿ ‘ಎ+’ ರೇಟಿಂಗ್ ಪಡೆದಿದ್ದಕ್ಕಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯವನ್ನು ಕೋರಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಪ್ರಧಾನಿ ಮೋದಿ, “ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ಅಭಿನಂದನೆಗಳು. ಇದು ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ, ಜಾಗತಿಕ ಮಟ್ಟದಲ್ಲಿ ನಮ್ಮ ಆರ್ಥಿಕ ನಾಯಕತ್ವವನ್ನು ಪ್ರತಿಬಿಂಬಿಸುತ್ತದೆ. ಅವರ ಸಮರ್ಪಣೆ ಮತ್ತು ದೃಷ್ಟಿ ನಮ್ಮ ರಾಷ್ಟ್ರದ ಬೆಳವಣಿಗೆಯ ಪಥವನ್ನು ಬಲಪಡಿಸಲು ಮುಂದುವರಿಯುತ್ತದೆ.” ಈ ಶ್ರೇಯಾಂಕವು ದೇಶಕ್ಕೆ ಹೆಮ್ಮೆಯ ಕ್ಷಣವಾಗಿದೆ ಎಂದು ಪ್ರಧಾನಿ ಮೋದಿ ಹೇಳಿಕೊಡಿದ್ದಾರೆ.

ಇದನ್ನೂ ಓದಿ : ಜಿಎಸ್‌ಟಿ ಸಂಗ್ರಹದಲ್ಲಿ ಮತ್ತೆ ಕರ್ನಾಟಕ ನಂ. 2

ಸೆಂಟ್ರಲ್ ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್ 2023 ರ ಭಾಗವಾಗಿ A+, A, ಅಥವಾ A- ಗ್ರೇಡ್‌ಗಳನ್ನು ಗಳಿಸಿದ ಸೆಂಟ್ರಲ್ ಬ್ಯಾಂಕ್ ಗವರ್ನರ್‌ಗಳ ಹೆಸರನ್ನು ಗ್ಲೋಬಲ್ ಫೈನಾನ್ಸ್ ನಿಯತಕಾಲಿಕವು ಬಿಡುಗಡೆ ಮಾಡಿದೆ.

ಈ ಬಗ್ಗೆ ಟ್ವಿಟ್ ಮಾಡಿರುವ ಆರ್ ಬಿಐ “ಗ್ಲೋಬಲ್ ಫೈನಾನ್ಸ್ ಸೆಂಟ್ರಲ್ ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್ 2023 ರಲ್ಲಿ ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ “A+” ರೇಟ್ ನೀಡಲಾಗಿದೆ ಎಂದು ಘೋಷಿಸಲು ನಾವು ಸಂತೋಷಪಡುತ್ತೇವೆ. ಮೂರು ಕೇಂದ್ರ ಬ್ಯಾಂಕ್‌ಗಳ ಪಟ್ಟಿಯಲ್ಲಿ ದಾಸ್ ಅವರನ್ನು ಅಗ್ರಸ್ಥಾನದಲ್ಲಿ ಇರಿಸಲಾಗಿದೆ’’ ಎಂದು ಹೇಳಿಕೊಂಡಿದೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles