ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಮ್ಮ 9 ವರ್ಷಗಳ ಅವಧಿಯಲ್ಲಿ ಇದುವರೆಗೂ ಒಂದೇ ಒಂದು ದಿನ ರಜೆ ಪಡೆದಿಲ್ಲ ಎಂದು ಆರ್‌ಟಿಐ ಅಡಿ ಸಲ್ಲಿಸಲಾಗಿದ್ದ ಪ್ರಶ್ನೆಗೆ ಉತ್ತರಿಸಲಾಗಿದೆ. 2014ರ ಮೇನಲ್ಲಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ಅವರು 3,000ಕ್ಕೂ ಹೆಚ್ಚು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ ಎಂದು ಆರ್‌ಟಿಐನಲ್ಲಿ ಉಲ್ಲೇಖಿಸಲಾಗಿದೆ.
ಆರ್‌ಟಿಐ ಅಡಿಯಲ್ಲಿ ಇದೇ ರೀತಿಯ ಅರ್ಜಿಯನ್ನು ಡಿಸೆಂಬರ್ 2015 ರಲ್ಲಿಯೂ ಸಲ್ಲಿಸಲಾಗಿತ್ತು. ಈ ವೇಳೆ ಸಹ ಪ್ರಧಾನಿ ಯಾವುದೇ ರಜೆ ಪಡೆದಿಲ್ಲ ಎಂದು ತಿಳಿಸಲಾಗಿತ್ತು. ಇದೀಗ ಮತ್ತೆ ಆರ್‌ಟಿಐ ಅರ್ಜಿ ಸಲ್ಲಿಸಲಾಗಿದ್ದು, ಅವರ 9 ವರ್ಷದ ಅವಧಿಯಲ್ಲಿ ಒಂದು ದಿನವೂ ರಜೆ ಪಡೆದಿಲ್ಲ ಎಂದು ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: ‘ಸಂಸತ್‌ನಲ್ಲಿ ಬಿಜೆಪಿಯ ಒಬ್ಬರೂ ನಗುವುದಿಲ್ಲ ಯಾಕಂದ್ರೆ ಮೋದಿ ಹೊಡೆಯುತ್ತಾರೆಂಬ ಭಯ ಅವ್ರಿಗೆ’
ಪ್ರಧಾನಿ ನರೇಂದ್ರ ಮೋದಿ ಯಾವುದೇ ರಜೆ ತೆಗೆದುಕೊಳ್ಳದಿರುವುದು ರಾಜಕೀಯ ಮತ್ತು ಸಾರ್ವಜನಿಕ ವಲಯದಲ್ಲಿ ಚರ್ಚೆಯ ವಿಷಯವಾಗುತ್ತಿದೆ. 2019ರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಧಾನಿ ನರೇಂದ್ರ ಮೋದಿ ಕಳೆದ 20 ವರ್ಷಗಳಿಂದ ಯಾವುದೇ ರಜೆ ತೆಗೆದುಕೊಂಡಿಲ್ಲ ಎಂದಿದ್ದರು. ಅವರು ಗುಜರಾತ್ ಸಿಎಂ ಆದಾಗಿನಿಂದ ಈವರೆಗೂ ಯಾವುದೇ ರಜೆ ತೆಗೆದುಕೊಂಡಿಲ್ಲ, ದೇಶಕ್ಕಾಗಿ ಹಗಲಿರುಳು ದುಡಿಯುತ್ತಿದ್ದಾರೆ ಎಂದು ಅಮಿತ್ ಶಾ ಹೇಳಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.