ನವದೆಹಲಿ : ರೋಜ್‌ಗಾರ್ ಮೇಳದಡಿ ವಿವಿಧ ಸರ್ಕಾರಿ ಇಲಾಖೆಗಳಲ್ಲಿಉದ್ಯೋಗಗಳಿಗೆ ನೇಮಕವಾಗಿರುವ 51 ಸಾವಿರ ಮಂದಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ನೇಮಕಾತಿ ಪತ್ರ ವಿತರಿಸಿದರು.
ಗೃಹ ವ್ಯವಹಾರಗಳ ಸಚಿವಾಲಯ (ಎಂಎಹೆಚ್) ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ ಪಿಎಫ್), ಗಡಿ ಭದ್ರತಾ ಪಡೆ (ಬಿಎಸ್ಎಫ್), ಶಸ್ತ್ರಸ್ತ್ರ ಸೀಮಾ ಬಲ (ಸಿಎಪಿಎಫ್) ಅಸ್ಸಾಂ ರೈಫಲ್ಸ್ (ಎಆರ್) ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (ಸಿಐಎಸ್ ಎಫ್), ಇಂಡೋ ಟಿಬೆಟಿಯನ್ ಬಾರ್ಡರ್ ಪೋಲಿಸ್ (ಐಟಿಬಿಎಫ್), ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ) ದೆಹಲಿ ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ನೇಮಕಗೊಂಡ ಸಿಬ್ಬಂದಿಗೆ ನೇಮಕಾತಿ ಪತ್ರ ವಿತರಿಸಲಾಯಿತು.
ಇದನ್ನೂ ಓದಿ : ಕಾಂಗ್ರೆಸ್ ನಾಲ್ಕು ತಲೆಮಾರಿನ 4ಜಿ ಪಕ್ಷ: ಅಮಿತ್ ಶಾ
ಇಂದು ದೇಶದ 45 ಸ್ಥಳಗಳಲ್ಲಿ ರೋಜ್ ಗಾರ್ ಮೇಳ ನಡೆಯಿತು. 8ನೇ ಆವೃತ್ತಿಯ ಈ ಕಾರ್ಯಕ್ರಮದಲ್ಲಿ ವರ್ಚುವಲ್ ವೇದಿಕೆ ಮೂಲಕ ನೇಮಕಾತಿ ಪತ್ರ ವಿತರಣೆಗೆ ಚಾಲನೆ ಕೊಟ್ಟು ಮಾತನಾಡಿದ ಪ್ರಧಾನಿ ಮೋದಿ, ಯುವಕರಿಗೆ ಹೊಸ ಮಾರ್ಗಗಳನ್ನು ತೆರೆಯಲು ಅರೆಸೈನಿಕ ಪಡೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ ಎಂದು ಹೇಳಿದರು.
ಅರೆಸೇನಾ ಪಡೆಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಸರಳೀಕರಿಸಲಾಗಿದ್ದು, ನೇಮಕಾತಿಯ ಸಮಯವನ್ನು ಕಡಿಮೆಗೊಳಿಸಲಾಗಿದೆ. ಆಟೋಮೊಬೈಲ್, ಫಾರ್ಮಾ ಕ್ಷೇತ್ರಗಳು ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ದೊಡ್ಡ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿವೆ ಎಂದು ಪ್ರಧಾನಿ ಹೇಳಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.