ಮಂಡ್ಯ: ಮಾ. 12ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಡ್ಯಕ್ಕೆ ಆಗಮಿಸಲಿದ್ದು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಬೆಂಗಳೂರು – ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಡಳಿತ ಎಲ್ಲ ತಯಾರಿ ಮಾಡುತ್ತಿದೆ. ಬೆಂಗಳೂರು ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿಯನ್ನು 11 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದಾರೆ.
ರಸ್ತೆಯ ಎರಡು ಬದಿಯಲ್ಲಿ ಮರದ ಕೊಂಬುಗಳಿಂದ ಬ್ಯಾರಿಕೇಡ್ ಅವಳಡಿಕೆ ಮಾಡುವುದರ ಜೊತೆಗೆ ರಸ್ತೆಯನ್ನು ಸ್ವಚ್ಛಗೊಳಿಸಿ ವಿಭಜಕಕ್ಕೆ ಬಣ್ಣ ಬಳಿದು ಶೃಂಗಾರ ಮಾಡಲಾಗುತ್ತಿದೆ. ಅಂದಹಾಗೆ ಒಂದು ಲಕ್ಷ ಮಂದಿ ಈ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.
ಜೆಡಿಎಸ್ ಭದ್ರಕೋಟೆ ಮಂಡ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ನಡೆಸಲಿದ್ದಾರೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ಮೋದಿ ಅವರು ಶಿವಮೊಗ್ಗ, ಬೆಳಗಾವಿಗೆ ಭೇಟಿ ನೀಡಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ್ದರು. ಹಾಗೂ ಫಲಾನುಭವಿಗಳ ಸಮಾವೇಶ ಉದ್ದೇಶಿಸಿ ಮಾತನಾಡಿದ್ದರು. ಸದ್ಯ ಈಗ ಮಂಡ್ಯದ ಜನರ ಮನ ಸೆಳೆಯಲು ಸಕ್ಕರೆ ನಾಡಿಗೆ ಭೇಟಿ ನೀಡುತ್ತಿದ್ದಾರೆ. ಇದಕ್ಕಾಗಿ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲಾಗುತ್ತಿದೆ.