ನವದೆಹಲಿ : ಜಿ-20 ಶೃಂಗಸಭೆ (G20 Summit)ಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಲಿರುವ ಯುಎಸ್ ಅಧ್ಯಕ್ಷ ಜೋ ಬೈಡೆನ್ ಪ್ರಧಾನಿ ನರೇಂದ್ರ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ಶ್ವೇತ ಭವನ ಶನಿವಾರ ತಿಳಿಸಿದೆ.
ಸೆಪ್ಟೆಂಬರ್ 9 ಮತ್ತು 10ರಂದು ನವದೆಹಲಿಯಲ್ಲಿ ಜಿ-20 ಶೃಂಗಸಭೆ ನಡೆಯಲಿದ್ದು, ಅದಕ್ಕೂ ಎರಡು ದಿನ ಮುನ್ನ ಸೆಪ್ಟೆಂಬರ್ 7ರಂದು ಬೈಡೆನ್ ಭಾರತಕ್ಕೆ ಆಗಮಿಸಲಿದ್ದಾರೆ. ಸೆ.8ರಂದು ಪ್ರಧಾನಿ ಜೊತೆ ಮಾತುಕತೆ ನಡೆಸಲಿದ್ದಾರೆ.
ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಜೊತೆಯೂ ಮೋದಿ ದ್ವಿಪಕ್ಷೀಯ ಮಾತುಕತೆ ನಡೆಸುವ ಸಾಧ್ಯತೆ ಇದೆ. ಅಲ್ಲದೆ ಬೈಡೆನ್ ಮತ್ತು ಮ್ಯಾಕ್ರನ್ ಗೆ ಮೋದಿ ಔತಣ ಕೂಟ ಏರ್ಪಡಿಸಲಿದ್ದಾರೆ ಎನ್ನಲಾಗಿದೆ. ಇವೆಲ್ಲವೂ ಶುಕ್ರವಾರ (ಸೆ.8) ಬೈಡೆನ್ ಅವರ ಆಗಮನ ಮತ್ತು ಭಾನುವಾರ (ಸೆ.10) ಮ್ಯಾಕ್ರನ್ ಅವರು ಬಾಂಗ್ಲಾದೇಶದ ಢಾಕಾಗೆ ನಿರ್ಗಮಿಸುವ ಸಮಯದ ಮೇಲೆ ನಿರ್ಧರಿತವಾಗಲಿದೆ.
ಬಾಂಗ್ಲಾದೇಶದ ಅಧ್ಯಕ್ಷೆ ಶೇಕ್ ಹಸೀನಾ ಜೊತೆಯೂ ಮೋದಿ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ. ಭಾರತ ಮತ್ತು ಬಾಂಗ್ಲಾ ನಡುವೆ ಹಲವು ತಿಂಗಳುಗಳಿಂದ ದ್ವಿಪಕ್ಷೀಯ ಮಾತುಕತೆ ನಡೆದಿಲ್ಲ. ಆದರೆ, ಹಸೀನಾ ಜೊತೆಗಿನ ಮಾತುಕತೆಯ ಬಗ್ಗೆ ಇನ್ನೂ ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.