Sunday, March 26, 2023
spot_img
- Advertisement -spot_img

ಬಿಜೆಪಿಯ ಚುನಾವಣಾ ರ್‍ಯಾಲಿಗಳನ್ನು ಉದ್ದೇಶಿಸಿ ಪಿಎಂ ಮೋದಿ ಮಾತನಾಡಲಿದ್ದಾರೆ : ಸುರೇಶ್ ಕಶ್ಯಪ್


ಶಿಮ್ಲಾ : ಪ್ರಧಾನಿ ನರೇಂದ್ರ ಮೋದಿ ಶಿಮ್ಲಾ, ಹಮೀರ್‌ಪುರ, ಕಂಗ್ರಾ ಮತ್ತು ಮಂಡಿಯಲ್ಲಿ ಸಾರ್ವಜನಿಕ ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸುರೇಶ್ ಕಶ್ಯಪ್ ಹೇಳಿದ್ದಾರೆ
ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 5 ರಿಂದ 9 ರವರೆಗೆ ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯ ಚುನಾವಣಾ ರ್‍ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ,

ಹಿಮಾಚಲ ಪ್ರದೇಶ ರಾಜ್ಯದಲ್ಲಿ ನವೆಂಬರ್ 12 ರಂದು ಚುನಾವಣೆ ನಡೆಯಲಿದೆ, ಟಿಕೆಟ್ ಸಿಗದ ಬಂಡಾಯ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯುವಂತೆ ಮನವೊಲಿಸುವ ಪ್ರಯತ್ನ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.ತಮ್ಮ ನಾಮಪತ್ರಗಳನ್ನು ಹಿಂತೆಗೆದುಕೊಳ್ಳದ ಬಿಜೆಪಿ ಬಂಡಾಯ ಅಭ್ಯರ್ಥಿಗಳನ್ನು ಆರು ವರ್ಷಗಳ ಕಾಲ ಪಕ್ಷದಿಂದ ಹೊರಹಾಕಲಾಗುವುದು. ಆದರೆ, ಬಂಡಾಯ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದುಕೊಳ್ಳುತ್ತಾರೆ. ಪಕ್ಷದಿಂದ ಉಚ್ಛಾಟಿಸುವ ಪರಿಸ್ಥಿತಿ ಬರುವುದಿಲ್ಲ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ನಾಮಪತ್ರ ಹಿಂಪಡೆಯಲು ಅಕ್ಟೋಬರ್ 29 ಕೊನೆಯ ದಿನವಾಗಿದೆ. 68 ಸ್ಥಾನಗಳ ವಿಧಾನಸಭೆಗೆ ನವೆಂಬರ್ 12 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ.

Related Articles

- Advertisement -

Latest Articles