ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡಿದ್ದ, ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಸುಮಾರು 3,800 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಪ್ರಧಾನಿ ಚಾಲನೆ ನೀಡಿ ಜನರನ್ನುದ್ದೇಶಿಸಿ ಮಾತನಾಡಿದ ಅವರು, ರಾಷ್ಟ್ರ ಸೈನ್ಯದ ಸುರಕ್ಷಿತವಾಗಿದ್ದರೆ ಆರ್ಥಿಕವಾಗಿ ಭಾರತ ಸುರಕ್ಷಿತವಾಗಿರತ್ತದೆ. ಮಂಗಳೂರಲ್ಲಿ 3800 ಕೋಟಿ ಮೊತ್ತದ ಯೋಜನೆಗಳ ಲೋಕಾರ್ಪಣೆ, ಶಂಕುಸ್ಥಾಪನೆ, ಭೂಮಿ ಪೂಜೆ ಆಗಿದೆ. ಕರ್ನಾಟಕದಲ್ಲಿ ಈ ಯೋಜನೆಗಳ ಮೂಲಕ ಹುದ್ದೆಗಳು ಸೃಷ್ಟಿಯಾಗಲಿದೆ. ಈ ಯೋಜನೆಗಳಿಂದ ವ್ಯಾಪಾರ ವಹಿವಾಟು ಹೆಚ್ಚಾಗಲಿದೆ, ಈ ಮೂಲಕ ಮೀನುಗಾರರು ತಮ್ಮ ಮಾರುಕಟ್ಟೆ ವಿಸ್ತರಣೆ ಮಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು.
ಅಲ್ಲದೇ ಮೇಕ್ ಇನ್ ಇಂಡಿಯಾ ವಿಸ್ತರಿಸುವುದು ಬಹಳ ಪ್ರಮುಖವಾದದ್ದು. ಕರಾವಳಿ ಪ್ರದೇಶಗಳಲ್ಲಿ ಸಾಗರಮಾಲಾ ಯೋಜನೆ ಅಡಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲಾಗುತ್ತದೆ. ಕಳೆದ ಎಂಟು ವರ್ಷದಲ್ಲಿ ಬಂದರು ವಹಿವಾಟು ಹೆಚ್ಚಾಗಿದೆ. ಮುಂದಿನ ವರ್ಷಗಳಲ್ಲಿ ಬಂದರುಗಳ ಸಾಮರ್ಥ್ಯ ಹೆಚ್ಚಳ ಮಾಡಲಾಗುತ್ತದೆ. ಕರ್ನಾಟಕ ಸಾಗರಮಾಲ ಯೋಜನೆಯ ದೊಡ್ಡ ಫಲಾನುಭವಿ ಆಗಲಿದೆ. ಬೆಂಗಳೂರು – ಚೆನ್ನೈ ಎಕ್ಸ್ ಪ್ರೆಸ್, ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್, ಹೀಗೆ ಹಲವು ಯೋಜನೆಗಳನ್ನ ರಸ್ತೆ ಮಾರ್ಗಕ್ಕಾಗಿ ಮಾಡಲಾಗ್ತಿದೆ. ದೇಶ ಹೊಸ ಅಭಿವೃದ್ಧಿಯತ್ತ ಸಾಗುತ್ತಿದೆ. ಕರ್ನಾಟಕದಲ್ಲಿ 8 ಲಕ್ಷ ಮನೆಗಳನ್ನ ನಿರ್ಮಾಣ ಮಾಡಲಾಗ್ತಿದೆ. ಜಲ ಜೀವನ್ ಮಿಷನ್ ಯೋಜನೆಯಲ್ಲಿ ಮನೆ ಮನೆಗೆ ನೀರು ಕಲ್ಪಿಸುವ ಯೋಜನೆ ಮಾಡಲಾಗಿದೆ. 30 ಲಕ್ಷ ಮನೆಗಳಿಗೆ ಜಲಜೀವನ್ ಯೋಜನೆ ಅಡಿ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ಡಬಲ್ ಇಂಜಿನ್ ಸರ್ಕಾರದ ಕುರಿತು ನನಗೆ ಖುಷಿ ಇದೆ ಎಂದರು. ಇನ್ನು ಭಾಷಣದ ವೇಳೆ ರಾಜ್ಯದ ರಾಣಿ ಅಬ್ಬಕ್ಕ, ರಾಣಿ ಚೆನ್ನ ಭೈರಾದೇವಿ ಅವರನ್ನು ಪ್ರಧಾನಿ ಮೋದಿ ನೆನಪಿಸಿಕೊಂಡರು. ಬ್ರಿಟೀಷರಿಂದ ತಮ್ಮ ರಾಜ್ಯ ಉಳಿಸಿಕೊಳ್ಳಲು ಹೋರಾಡಿದ್ದು ನಮಗೆ ಎಂದೆಂದಿಗೂ ಸ್ಪೂರ್ತಿ. ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಇವರ ಹೋರಾಟ ನೆನೆಯುತ್ತೇನೆ. ಕಳೆದ ಎಂಟು ವರ್ಷಗಳಲ್ಲಿ ಇಡೀ ದೇಶಾದ್ಯಂತ ಕರಾವಳಿ ಉತ್ಪನ್ನಗಳು ಮತ್ತು ವಹಿವಾಟು ವ್ಯಾಪಕವಾಗಿ ಬೆಳೆದಿದೆ. ತಂತ್ರಜ್ಞಾನವನ್ನು ದೇಶದ ಮೂಲೆಮೂಲೆಗೂ ತಲುಪಿಸುವ ಪ್ರಯತ್ನದಲ್ಲಿ ಸರ್ಕಾರ ಯಶಸ್ವಿಯಾಗಿದೆ. ಮೀನುಗಾರರ ಅಭಿವೃದ್ಧಿಗೆ ಸಾಕಷ್ಟು ಕ್ರಮಗಳನ್ನು ಕೊಗೊಳ್ಳಲಾಗಿದೆ. ಈಗ ಚಾಲನೆ ನೀಡಿರುವ ಯೋಜನೆಗಳಿಂದ ವ್ಯಾಪಕ ಉದ್ಯೋಗ ಸೃಷ್ಟಿಯಾಗುವುದಲ್ಲದೇ ಆರ್ಥಿಕ ಬೆಳವಣಿಗೆಯೂ ಆಗಲಿದೆ ಎಂದರು. ದೇಶದ ಹಲವು ನಗರಗಳಲ್ಲಿ ಮೆಟ್ರೋ ನಿರ್ಮಾಣ ವೇಗದಿಂದ ಆಗುತ್ತಿದೆ. ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸುಲಭ ಸಂಪರ್ಕ ವ್ಯವಸ್ಥೆ ಮಾಡಲಾಗಿದೆ. ಇವೆಲ್ಲವೂ ನಮ್ಮ ಸರ್ಕಾರದ ಕಳೆದ ಎಂಟು ವರ್ಷಗಳ ಸಾಧನೆ ಎಂದರು ಡಬಲ್ ಇಂಜಿನ್ ಸರ್ಕಾರದ ಬಗ್ಗೆ ಹಾಡಿಹೊಗಳಿದ್ರು.