ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂಡಿಯಾವನ್ನು ‘ಭಾರತ್’ ಎಂದು ಮರುನಾಮಕರಣ ಮಾಡುವ ನಿರ್ಣಯ ಮಂಡಿಸುವ ಸಾಧ್ಯತೆಯಿದೆ.
ಸೆಪ್ಟೆಂಬರ್ 18 ರಿಂದ 22 ರವರೆಗೆ ಐದು ದಿನಗಳ ವಿಶೇಷ ಸಂಸತ್ ಅಧಿವೇಶನ ನಡೆಯಲಿದೆ. ಈ ಅವಧಿಯಲ್ಲಿ ಹೊಸ ಸಂಸತ್ ಭವನದಲ್ಲಿ ನಿರ್ಣಯವನ್ನು ಪ್ರಧಾನಿ ಮಂಡಿಸಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ : ಇಂದು 6 ರಾಜ್ಯಗಳ 7 ಸ್ಥಾನಗಳಿಗೆ ಉಪಚುನಾವಣೆಗೆ ಮತದಾನ, ಇದು ಇಂಡಿಯಾ ಒಕ್ಕೂಟಕ್ಕೆ ಮೊದಲ ಪರೀಕ್ಷೆ!
ವಿಶೇಷ ಸಂಸತ್ ಅಧಿವೇಶನದಲ್ಲಿ ಪ್ರಶ್ನೋತ್ತರ ಸಮಯ, ಶೂನ್ಯ ಸಮಯ ಮತ್ತು ಖಾಸಗಿ ಸದಸ್ಯರ ವ್ಯವಹಾರ ಇರುವುದಿಲ್ಲ. ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ನಡೆಯುವ ಅಧಿವೇಶನಗಳಿಗೆ ಇದನ್ನು ನಿರ್ವಹಿಸಲಾಗುತ್ತದೆ.
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ನಿಟ್ಟಿನಲ್ಲಿ ವಿರೋಧ ಪಕ್ಷಗಳು ರಚಿಸಿಕೊಂಡಿರುವ ಮೈತ್ರಿಕೂಟಕ್ಕೆ ‘ಇಂಡಿಯಾ’ ಎಂದು ಹೆಸರಿಟ್ಟಿರುವುದರಿಂದ ದೇಶದ ಹೆಸರನ್ನು ಭಾರತ್ ಎಂದು ಮರು ನಾಮಕರಣ ಮಾಡಲು ಪ್ರಧಾನಿ ಮೋದಿ ಮುಂದಾಗಿದ್ದಾರೆ.
ಅಲ್ಲದೆ, ಈ ಬಗ್ಗೆ ಬಿಜೆಪಿಯ ರಾಜ್ಯಸಭಾ ಸಂಸದ ಹರನಾಥ್ ಸಿಂಗ್ ಯಾದವ್ ಮಾತನಾಡಿ, ದೇಶದ ಹೆಸರನ್ನು ಇಂಡಿಯಾವನ್ನು ಭಾರತ ಎಂದು ಬದಲಾಯಿಸಬೇಕು. ‘ಇಂಡಿಯಾ’ ಎಂಬ ಪದವನ್ನು ಬ್ರಿಟಿಷರು ಬಳಸಿದ್ದರು ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ವಕ್ಫ್ ಕಾಯ್ದೆ ರದ್ದುಗೊಳಿಸಿ, ಪಿಎಂ ಮೋದಿಗೆ ಪತ್ರ ಬರೆದ ಶಾಸಕ ಯತ್ನಾಳ್
ಇತ್ತೀಚೆಗಷ್ಟೇ ವಿರೋಧ ಪಕ್ಷ ತನ್ನ ಮೈತ್ರಿಕೂಟಕ್ಕೆ I.N.D.I.A. ಮರುನಾಮಕರಣ ಮಾಡಿಕೊಂಡಿದ್ದಾರೆ. ಇದು ಮುಂದಿನ ವರ್ಷದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಎನ್‌ಡಿಎಯನ್ನು ಎದುರಿಸಲು ಯೋಜಿಸಿರುವ ಸುಮಾರು 28 ಪಕ್ಷಗಳನ್ನು ಒಳಗೊಂಡಿದೆ.
`ಇಂಡಿಯಾ’ (India) ಬದಲು ದೇಶದ ಹೆಸರನ್ನು `ರಿಪಬ್ಲಿಕ್ ಆಫ್ ಭಾರತ್’ ಎಂದು ಕರೆಯಬೇಕು ಎಂಬುದಾಗಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಲಹೆ ನೀಡಿದ್ದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ನಿರ್ಣಯಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ. ಜಿ20 ಶೃಂಗಸಭೆಗೆ ರಾಷ್ಟ್ರಪತಿಗಳು ಗಣ್ಯರಿಗೆ ನೀಡಿದ ಆಹ್ವಾನ ಪತ್ರಿಕೆಯಲ್ಲಿ `ಪ್ರೆಸಿಡೆಂಟ್ ಆಫ್ ಇಂಡಿಯಾ’ ಬದಲಿಗೆ `ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಉಲ್ಲೇಖಿಸಿದ ನಂತರ ಈ ಚರ್ಚೆ ಹುಟ್ಟಿಕೊಂಡಿದೆ.


ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.