ಬೆಂಗಳೂರು: ‘ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಪ್ರತಿಪಕ್ಷಗಳ ಪತ್ರಗಳಿಗೆ ಪ್ರಧಾನಿ ಉತ್ತರಿಸುತ್ತಾರೆ. ಕಾಂಗ್ರೆಸ್ ಆರೋಪಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಕೂಡಾ ಉತ್ತರಿಸುವ ವಿಶ್ವಾಸವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ‘ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಪ್ರತಿಪಕ್ಷಗಳ ಪತ್ರಗಳಿಗೆ ಪ್ರಧಾನಿ ಉತ್ತರಿಸುತ್ತಾರೆ ಎಂದರು.ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಬೆಂಗಳೂರು ರಸ್ತೆಗಳಿಗೆ ರಸ್ತೆ ಹಾಕಲಾಗಿದೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ರಸ್ತೆಗಳು ಅವರ ನಾಯಕರ ಪ್ರಯಾಣಕ್ಕಾಗಿಯೇ ಹೊರತು ನಾಗರಿಕರ ಅನುಕೂಲಕ್ಕಾಗಿ ಅಲ್ಲ ಎಂದರು.
ರಾಜ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಡಿಕೆ ಶಿವಕುಮಾರ್, ಗುತ್ತಿಗೆದಾರರೊಬ್ಬರು ಕಮಿಷನ್ ಬೇಡಿಕೆಯ ಮೇರೆಗೆ ದಯಾಮರಣಕ್ಕೆ ಅನುಮತಿ ಕೋರಿದ್ದಾರೆ ಎಂದು ಆರೋಪಿಸಿದರು. ಮೋದಿ ಭೇಟಿಗೂ ಮುನ್ನ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿರುವಂತೆ ಭ್ರಷ್ಟಾಚಾರವನ್ನು ಮುಚ್ಚಿಡಬೇಡಿ ಎಂಬ ಸಂದೇಶವನ್ನು ಪಕ್ಷದವರಿಗೆ ರವಾನಿಸಬೇಕು ಎಂದು ಒತ್ತಾಯಿಸಿದರು.
ಶುಕ್ರವಾರದ ಕಾರ್ಯಕ್ರಮಕ್ಕೆ ಸರ್ಕಾರ 48 ಕೋಟಿ ರೂಪಾಯಿ ಖರ್ಚು ಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, ಒಬ್ಬ ವ್ಯಕ್ತಿ ಮತ್ತು ಒಂದು ಪಕ್ಷಕ್ಕಾಗಿ ಹಣ ಖರ್ಚು ಮಾಡುತ್ತಿರುವುದು ಎಲ್ಲರಿಗೂ ಗೊತ್ತು. ಜನರು ಅವರನ್ನು ಕಿತ್ತೊಗೆಯ್ಯಲು ನಿರ್ಧರಿಸಿದ್ದಾರೆ ಎಂದು ಹೇಳಿದರು.