ಚಿಕ್ಕಬಳ್ಳಾಪುರ: ಪ್ರಧಾನಮಂತ್ರಿ ನರೇಂದ್ರ ಮೋದಿ ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿದ್ದು ಮಧುಸೂದನ ಸಾಯಿ ಮೆಡಿಕಲ್ ಕಾಲೇಜನ್ನು ಉದ್ಘಾಟನೆ ಮಾಡಿದರು.
ನಂತರ ಸರ್ ಎಂ.ವಿಶ್ವೇಶ್ವರಯ್ಯ ಸ್ಮಾರಕಕ್ಕೆ ತೆರಳಿದ ಮೋದಿಯವರು, ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು. ನಂತರ ಜನತೆಯನ್ನು ಉದ್ದೇಶಿಸಿ ಮಾತನಾಡಿ, ಚಿಕ್ಕಬಳ್ಳಾಪುರ ಆಧುನಿಕ ಭಾರತಕ್ಕೆ ಒಂದು ಮಾದರಿ, ಸರ್ ಎಂ.ವಿಶ್ವೇಶ್ವರಯ್ಯ ಹುಟ್ಟಿದ ಪುಣ್ಯ ಭೂಮಿಗೆ ಬಂದಿದ್ದು ನನ್ನ ಸೌಭಾಗ್ಯ ಎಂದು ಹೇಳಿದರು.ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ, ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕ ಅಭಿವೃದ್ಧಿ ಆಗುತ್ತಿದೆ, ಸತ್ಯಸಾಯಿ ಆಶ್ರಮದಿಂದ ಶೈಕ್ಷಣಿಕ, ಸಾಮಾಜಿಕ, ವೈದ್ಯಕೀಯ ಸೇವೆ ನಡೆಯುತ್ತಿದೆ.
ಇಂದು ದೇಶದಲ್ಲಿ 650ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳಿವೆ. ಕರ್ನಾಟಕದಲ್ಲೇ ಸುಮಾರು 70ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳು ಇವೆ ಎಂದರು. ಬಡವರ ಅಭಿವೃದ್ಧಿಯೇ ಬಿಜೆಪಿಯ ಪರಮೋಚ್ಛ ಗುರಿಯಾಗಿದೆ. ಆಯುಷ್ಮಾನ ಭಾರತ್ ಯೋಜನೆಯಿಂದ ಬಡ ರೋಗಿಗಳಿಗೆ ಅನುಕೂಲವಾಗಿದೆ. ಕರ್ನಾಟಕದ ಲಕ್ಷಾಂತರ ರೋಗಿಗಳಿಗೆ ಯೋಜನೆಯಿಂದ ಅನುಕೂಲವಾಗಿದೆ ಎಂದು ಹೇಳಿದರು.