Monday, March 20, 2023
spot_img
- Advertisement -spot_img

ಟೋಲ್‌ ಸಂಗ್ರಹ ವಿರೋಧಿಸಿ ಪ್ರತಿಭಟನೆ : ನಿಖಿಲ್‌ ಕುಮಾರಸ್ವಾಮಿ ಪೊಲೀಸರ ವಶಕ್ಕೆ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್‌ ಸಂಗ್ರಹ ವಿರೋಧಿಸಿ ಪ್ರತಿಭಟಿಸುತ್ತಿದ್ದ ನಿಖಿಲ್ ಕುಮಾರಸ್ವಾಮಿಯವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಿರ್ಮಿಸಲಾದ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಕಳಪೆ ಕಾಮಗಾರಿ ಮಾಡಲಾಗಿದೆ. ಇನ್ನು ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಇರುವ ಸರ್ವಿಸ್‌ ರಸ್ತೆಯನ್ನು ಸಮರ್ಪಕವಾಗಿ ಅಭಿವೃದ್ಧಿ ಮಾಡದಿದ್ದರೂ ಟೋಲ್‌ ಸಂಗ್ರಹಣೆ ಮಾಡುತ್ತಿರುವುದು ರಾಜ್ಯ ಸಾರ್ವಜನಿಕರಿಗೆ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಆಕ್ರೋಶಿಸಿದ್ದರು.

ಇದೇ ವಿಚಾರವಾಗಿ ಸತತ ಎರಡು ಗಂಟೆಗೂ ಹೆಚ್ಚು ಕಾಲ‌ ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೂ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆಗೊಂಡಿದ್ದರೂ ಸರ್ವೀಸ್ ರಸ್ತೆ ಆಗಿಲ್ಲ. ಫಾಸ್ಟಾಗ್ ಕೆಲಸ ನಿರ್ವಹಿಸುತ್ತಿಲ್ಲ. ಟೋಲ್ ಸಂಗ್ರಹದ ಮೂಲಕ ಹಗಲು ದರೋಡೆ ನಡೆಯುತ್ತಿದೆ ಅನ್ನೋ ಆರೋಪ ಕೇಳಿಬಂದಿದ್ದಕ್ಕೆ ಕರ್ನಾಟಕ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡಿದೆ.

ಜನರ ಪ್ರತಿಭಟನೆ, ವಿಪಕ್ಷಗಳ ಆರೋಪ ಕುರಿತು ಉಲ್ಲೇಖಿಸಿದ ಹೈಕೋರ್ಟ್, 3 ವಾರಗಳಲ್ಲಿ ಉತ್ತರ ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚಿಸಿದೆ.

Related Articles

- Advertisement -

Latest Articles