Thursday, June 8, 2023
spot_img
- Advertisement -spot_img

ಡಿಕೆಶಿ ನೋಟು ಎಸೆದ ಪ್ರಕರಣ : ದೂರು ದಾಖಲು

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರೋಡ್ ಶೋ ವೇಳೆ 500 ರೂ. ಮುಖಬೆಲೆಯ ನೋಟುಗಳನ್ನು ಎಸೆದ ಪ್ರಕರಣದ ಹಿನ್ನೆಲೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಪ್ರಜಾಧ್ವನಿ ಯಾತ್ರೆ ವೇಳೆ ಡಿಕೆ ಶಿವಕುಮಾರ್ ತೆರೆದ ಬಸ್ಸಿನಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ನೋಟು ಎಸೆದಿದ್ದು ,ಡಿಕೆಶಿ ನೋಟು ಎಸೆಯುತ್ತಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲೂ ಹರಿದಾಡಿತ್ತು. ಎರಡು ದಿನಗಳ ಹಿಂದೆಯಷ್ಟೇ ಪ್ರಜಾಧ್ವನಿ ಯಾತ್ರೆ ವೇಳೆ 500 ರೂ. ನೋಟುಗಳನ್ನು ಎರಚಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ರಾಜ್ಯ ವಿಧಾನಸಭೆಗೆ ಚುನಾವಣೆಗೆ ಘೋಷಣೆಯಾದ ಬೆನ್ನಲ್ಲೇ ಬಿಜೆಪಿ ದೂರು ದಾಖಲಿಸಿದೆ.

ಶ್ರೀರಂಗಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆ ವೇಳೆ ಈ ಘಟನೆ ನಡೆದಿತ್ತು, ಬಗ್ಗೆ ಬಿಜೆಪಿ ಮುಖಂಡ ರವಿಕುಮಾರ್ ನೇತೃತ್ವದ ನಿಯೋಗ ಡಿಕೆಶಿ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಜತೆಗೆ, ಎಸ್​ಡಿಪಿಐ ಮುಖಂಡರೊಬ್ಬರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ವಿಚಾರವಾಗಿಯೂ ದೂರು ಸಲ್ಲಿಸಿದ್ದಾರೆ.

Related Articles

- Advertisement -spot_img

Latest Articles